ಲೋಕಸಭೆ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಪ್ರತ್ಯೇಕ ಸ್ಪರ್ಧೆ

ಶೇರ್ ಮಾಡಿ

ಬಿಜೆಪಿ ನಾಯಕರು ಮತ್ತು ಅರುಣ್ ಕುಮಾರ್ ಪುತ್ತಿಲ ನಡುವಿನ ಕೆಲವು ದಿನಗಳ ಹಗ್ಗಜಗ್ಗಾಟ ಇದೀಗ ಒಂದು ಹಂತ ಕಂಡಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಮಾಡಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ‌ ಕುಮಾರ್ ಮಾರ್ತ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಈಗಾಗಲೇ ಬಿಜೆಪಿ ಪಕ್ಷದ ನಾಯಕರಾದ ಯಡಿಯೂರಪ್ಪ, ಸಂತೋಷ್ ಜಿ, ವಿಜಯೇಂದ್ರ, ಸತೀಶ್ ಕುಂಪಲ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರೊಂದಿಗೆ ಮಾತುಕತೆ ನಡೆದಿತ್ತು. ಎಲ್ಲರಿಂದಲೂ ಸಕಾರಾತ್ಮಕವಾಗಿ ಸ್ಪಂದನೆ ಸಿಕ್ಕಿದೆ. ಅದರೆ ಇಲ್ಲಿನ ತನಕ ಯಾವ ನಿರ್ಧಾರವನ್ನು ಅವರು ಕೈಗೊಂಡಿಲ್ಲ. ಹಾಗಾಗಿ ಪುತ್ತಿಲ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ‌. ಬಹಿರಂಗವಾಗಿ ಮಂಡಲ ಅಧ್ಯಕ್ಷ ನೀಡಬೇಕೆಂದು ಬೇಡಿಕೆ ಇಟ್ಟಿದ್ದೆವು. ಅದರೆ ಅದು ಯಾವುದೂ ಸಫಲವಾಗಿಲ್ಲ. ಕಾರ್ಯಕರ್ತರ ಒತ್ತಾಸೆಯಂತೆ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ‌ ಕುಮಾರ್ ಮಾರ್ತ ಹೇಳಿದ್ದಾರೆ.

ಪುತ್ತೂರು ತಾಲೂಕಿನಲ್ಲಿ ಜನರ ಸಮಸ್ಯೆಗಳಿಗೆ ಸ್ಪಂಧಿಸುವ ಸಂಘಟನೆ ಇದ್ದರೆ ಅದು ಪುತ್ತಿಲ ಪರಿವಾರ. ಈಗಾಗಲೇ ನಾವು ಚಾಪು ಮೂಡಿಸಿದ್ದೇವೆ. ಮುಂದೆ ಇನ್ನೂ ಹೆಚ್ಚು ಸೇವೆ ಸಲ್ಲಿಸುವ ಸಲುವಾಗಿ ನಮ್ಮ ಆರೋಗ್ಯ ಘಟಕದಿಂದ ಬೆಟ್ಟಂಪಾಡಿ ವಿಭಾಗದಲ್ಲಿ ಮಾ.3ಕ್ಕೆ ಆ್ಯಂಬುಲೆನ್ಸ್ ಸೇವೆ ಆರಂಭಿಸಲಿದ್ದೇವೆ. ಮುಂದಿನ ದಿನ ಜಿಲ್ಲೆಯಾದ್ಯಂತ ಸಂಘಟನೆ ಗಟ್ಟಿಗೊಳಿಸುವ ಕೆಲಸ ಮಾಡುತ್ತೇವೆ. ಸಂಘಟನೆಯನ್ನು ರಾಜ್ಯಕ್ಕೆ ವಿಸ್ತರಿಸಲಿದ್ದೇವೆ. ಕೆಲ ದಿನಗಳ ಹಿಂದೆ ನಡೆದ ಸಮಾಲೋಚನಾ ಸಭೆಯ ಬಳಿಕ ಮುಂದಿನ ಎಲ್ಲಾ ಚುನಾವಣೆಯಲ್ಲಿ ನಮ್ಮ ಸ್ಪರ್ಧೆ ಇರಬೇಕೆಂದು ನಾವು ತೀರ್ಮಾನ ಕೈಗೊಂಡಿದ್ದೇವೆ. ಮುಂದೆ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಮಾಡಲಿದೆ. ರಾಜ್ಯಕ್ಕೂ ಸೇವಾ ಸಂಘಟನೆ ವಿಸ್ತರಣೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪರಿವಾರದ ವಕ್ತಾರ ಕೃಷ್ಣ ಉಪಾಧ್ಯಾಯ, ಉಪಾಧ್ಯಕ್ಷ ಮಹೇಂದ್ರ ವರ್ಮ, ನಗರ ಅಧ್ಯಕ್ಷ ಅನಿಲ್ ತೆಂಕಿಲ, ಕೋಡಿಬೈಲು ಉಪಸ್ಥಿತರಿದ್ದರು.

Leave a Reply

error: Content is protected !!