ಕುಕ್ಕೆ ಸುಬ್ರಮಣ್ಯ 3 ನೇ ಹಂತದ ಮಾಸ್ಟರ್‌ ಪ್ಲಾನ್‌ ಶೀಘ್ರದಲ್ಲೇ : ಸಚಿವೆ ಶಶಿಕಲಾ ಜೊಲ್ಲೆ

ಶೇರ್ ಮಾಡಿ

ನೇಸರ ಫೆ.8: ದೈವ ಸಂಕಲ್ಪ ಯೋಜನೆಯ ಅಡಿಯಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಮೂರನೇ ಹಂತದ ಮಾಸ್ಟರ್‌ ಪ್ಲಾನ್‌ ನ ಪ್ರಸ್ತಾವಿತ ಕಾಮಗಾರಿಗಳನ್ನು ಅಂತಿಮಗೊಳಿಸಲಾಗಿದ್ದು, ಶೀಘ್ರದಲ್ಲೇ ಸಚಿವ ಸಂಪುಟ ಸಭೆಯ ಮುಂದಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ಅವರು ತಿಳಿಸಿದರು.
ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.ನಂತರ ತಮ್ಮ ಭೇಟಿಯ ನೆನೆಪಿಗಾಗಿ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ನಡೆಸಲಾಗುತ್ತಿರುವ ವನ ಸಂವರ್ಧನಾ ಕಾರ್ಯಕ್ರಮದ ಅಂಗವಾಗಿ ನಾಗಸಂಪಿಗೆ ಗಿಡವನ್ನು ನೆಟ್ಟರು.
ನಂತರ ಸಚಿವರಾದ ಅಂಗಾರ ಹಾಗೂ ಜಿಲ್ಲಾಧಿಕಾರಿಗಳಾದ ಡಾ.ರಾಜೇಂದ್ರ ಅವರ ಉಪಸ್ಥಿತಿಯಲ್ಲಿ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು.ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ 300 ಕೋಟಿ ರೂಪಾಯಿಗಳ ಮೂರನೇ ಹಂತದ ಮಾಸ್ಟರ್‌ ಪ್ಲಾನ್‌ ಪ್ರಸ್ತಾವಿಸಲಾಗಿದೆ.ಈ ಪ್ರಸ್ತಾವಿತ ಮಾಸ್ಟರ್‌ ಪ್ಲಾನ್‌ ನ ಬಗ್ಗೆ ಬೆಂಗಳೂರಿನಲ್ಲಿ ಹಾಗೂ ಇದೀಗ ನಡೆದ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಗಿದೆ.ಈ ಕಾಮಗಾರಿಗಳನ್ನು ಅಂತಿಮಗೊಳಿಸಿದ್ದು,ಶೀಘ್ರದಲ್ಲೇ ಸಚಿವ ಸಂಪುಟ ಸಭೆಯ ಮುಂದಿರಿಸಿ ಒಪ್ಪಿಗೆ ಪಡೆದು ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.ದೇವಸ್ಥಾನದ ಅಧ್ಯಕ್ಷರಾದ ಮೋಹನ್‌ ರಾಮ್‌ ಸುಳ್ಳಿ,ದೇವಸ್ಥಾನದ ಕಾರ್ಯನಿರ್ವಹಕ ಅಧಿಕಾರಿ ಡಾ.ನಿಂಗಯ್ಯ ಉಪಸ್ಥಿತರಿದ್ದರು.

—-ಜಾಹೀರಾತು—-

Leave a Reply

error: Content is protected !!