ಚಂದ್ರಶೇಖರ ಬಿಳಿನೆಲೆ , ಡಾ. ಅನುರಾಧಾ ಕುರುಂಜಿ ದಂಪತಿಗಳಿಗೆ ವಿಶ್ವ ಜ್ಞಾನಶ್ರೀ ಪುರಸ್ಕಾರ

ಶೇರ್ ಮಾಡಿ

ಸುಳ್ಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ವಿವಿಧ ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಚಂದ್ರಶೇಖರ ಬಿಳಿನೆಲೆ ಹಾಗೂ ಡಾ. ಅನುರಾಧಾ ಕುರುಂಜಿ ದಂಪತಿಗಳಿಗೆ ಬೆಳಗಾವಿಯ ಕಸ್ತೂರಿ ಸಿರಿಕನ್ನಡ ವೇದಿಕೆ ಕೊಡ ಮಾಡುವ ವಿಶ್ವ ಜ್ಞಾನಶ್ರೀ ಪುರಸ್ಕಾರ ಲಭಿಸಿದೆ. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಗೌರವ ಪುರಸ್ಕಾರ ಪ್ರಧಾನ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ನೀಡಲಾಯಿತು.

ದಂಪತಿಗಳಿಬ್ಬರು ವ್ಯಕ್ತಿತ್ವ ವಿಕಸನ ತರಬೇತುದಾರ ರಾಗಿದ್ದು, ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಂಡಿರುವುದಲ್ಲದೆ ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯಿಕ ಚಟುವಟಿಕೆಗಳಲ್ಲೂ ಕಾರ್ಯನಿರ್ವಹಿಸುತ್ತಿದ್ದಾರೆ.

ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಬೋಧಕರಾಗಿರುವ ಚಂದ್ರಶೇಖರ ಬಿಳಿ ನೆಲೆಯವರಿಗೆ ವ್ಯಕ್ತಿತ್ವ ವಿಕಸನ ಕ್ಷೇತ್ರದಲ್ಲಿ ಹಾಗೂ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿರುವ ಡಾ. ಅನುರಾಧಾ ಕುರುಂಜಿಯವರಿಗೆ ಸಾಮಾಜಿಕ ಕ್ಷೇತ್ರದಲ್ಲಿ ಪ್ರಶಸ್ತಿ ನೀಡಲಾಗಿದೆ.

Leave a Reply

error: Content is protected !!