ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ – ತಪ್ಪಿದ ಅನಾಹುತ

ಶೇರ್ ಮಾಡಿ

ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು (Car) ಟ್ರಾನ್ಸ್ ಫಾರ್ಮರ್ ಅಳವಡಿಸಿದ್ದ ವಿದ್ಯುತ್ ಕಂಬಕ್ಕೆ (Electricity Pole) ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಪೊನ್ನಂಪೇಟೆ – ಕಾನೂರು ನಡುವಿನ ಮುಗುಟಗೇರಿ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಮುಂದಕ್ಕೆ ಚಲಿಸುತ್ತಿದ್ದ ಕಾರು ಏಕಾಏಕಿ ಎಡಕ್ಕೆ ತಿರುಗಿ ಟ್ರಾನ್ಸ್ ಫರ್ಮರ್ ಅಳವಡಿಸಿದ್ದ ಕಂಬದೊಳಗೆ ಸಿಲುಕಿ ಮಗುಚಿಕೊಂಡಿದೆ.

ಕಾರು ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ. ತಕ್ಷಣ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದರಿಂದ ಅನಾಹುತ ತಪ್ಪಿದೆ. ಘಟನೆ ಸಂಬಂಧಿಸಿದಂತೆ ಗೋಣಿಕೋಪ್ಪ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!