ನೆಲ್ಯಾಡಿ: ಅನಾರೋಗ್ಯದಿಂದ ಯುವಕ ನಿಧನ

ಶೇರ್ ಮಾಡಿ

ನೆಲ್ಯಾಡಿ ಇಲ್ಲಿನ ಸಂಕದ ಬಳಿ ನಿವಾಸಿ ನಾಸೀರ್ ಅವರ ಪುತ್ರ ದಾವೂದ್ ಎನ್.ಪಿ.(19 ವ.)ರವರು ಅನಾರೋಗ್ಯದಿಂದ ಮಾ.3ರಂದು ಸಂಜೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಾವನೊಂದಿಗೆ ಸಂತೆ ವ್ಯಾಪಾರದಲ್ಲಿ ತೊಡಗಿಕೊಂಡಿದ್ದ ನಾಸೀರ್ ಅವರು ಮೂರು ದಿನದ ಹಿಂದೆ ದಿಢೀರ್ ಅನಾರೋಗ್ಯಕ್ಕೆ ಒಳಗಾಗಿದ್ದರು. ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ನಿಧನರಾಗಿದ್ದಾರೆ. ಮೃತರು ತಂದೆ ನಾಸೀರ್, ತಾಯಿ ಖತೀಜಮ್ಮ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

ಮೃತರ ಮನೆಗೆ ನೆಲ್ಯಾಡಿ ಮಸೀದಿ ಅಧ್ಯಕ್ಷ ಹನೀಫ್ ಸಿಟಿ, ನೆಲ್ಯಾಡಿ ಸಂತಜಾಜ್ ವಿದ್ಯಾಸಂಸ್ಥೆಯ ಸಂಚಾಲಕ ರೆ.ಫಾ.ನೋಮಿಸ್ ಕುರಿಯಾಕೋಸ್, ಪ್ರೌಢಶಾಲಾ ಮುಖ್ಯ ಶಿಕ್ಷಕ ತೋಮಸ್ ಎಂ.ಐ., ಕರ್ನಾಟಕ ಮುಸ್ಲಿಂ ಜಮಾಅತ್ ನೆಲ್ಯಾಡಿ ಸರ್ಕಲ್ ಅಧ್ಯಕ್ಷ ಕೆ.ಇ.ಅಬೂಬಕ್ಕರ್, ನೋಟರಿ ನ್ಯಾಯವಾದಿ ಇಸ್ಮಾಯಿಲ್, ನೆಲ್ಯಾಡಿ ವರ್ತಕ ಸಂಘದ ಮಾಜಿ ಅಧ್ಯಕ್ಷ ರಫೀಕ್ ಸೀಗಲ್, ನೆಲ್ಯಾಡಿ ಗ್ರಾ.ಪಂ.ಸದಸ್ಯ ಮೊಹಮ್ಮದ್ ಇಕ್ಬಾಲ್ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

Leave a Reply

error: Content is protected !!