ಆಲಂಕಾರು: ಉಚಿತ ದಂತ ಚಿಕಿತ್ಸಾ ಶಿಬಿರ

ಶೇರ್ ಮಾಡಿ

ಲಯನ್ಸ್ ಕ್ಲಬ್ ಆಲಂಕಾರು ದುರ್ಗಾಂಬಾ, ಮನವಳಿಕೆ ಗುತ್ತು ಕುಟುಂಬ ದೈವ ದೇವರುಗಳ ಸೇವಾ ಟ್ರಸ್ಟ್ (ರಿ) ಹಾಗೂ ಕೆ.ವಿ.ಜಿ ಡೆಂಟಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇವರ ಸಹಯೋಗದಲ್ಲಿ ಮಾ.10ರಂದು ಬೆಳಗ್ಗೆ 9:00 ರಿಂದ 12:30 ವರೆಗೆ ದುರ್ಗಾಂಬಾ ವಿದ್ಯಾ ಸಂಸ್ಥೆ ಆಲಂಗಾರು ನಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಲಿದೆ.

ಕಾರ್ಯಕ್ರಮವನ್ನು ಮನವಳಿಕೆಗುತ್ತು ಕುಟುಂಬ ದೈವ ದೇವರುಗಳ ಸೇವಾ ಟ್ರಸ್ಟ್(ರಿ) ನ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಲಿದ್ದಾರೆ. ಲಯನ್ಸ್ ಕ್ಲಬ್ ಅಲಂಕಾರ ದುರ್ಗಾಂಬಾ ಇದರ ಅಧ್ಯಕ್ಷರಾದ ಪ್ರಶಾಂತ್ ರೈ ಮನವಳಿಕೆ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಲಂಕಾರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಶೀಲ ಕೊಂಡಾಡಿ ಹಾಗೂ ಡಾ.ಹರಿದಾಸ್ ಭಟ್ ಭಾಗವಹಿಸಲಿದ್ದಾರೆ.
ಶಿಬಿರದಲ್ಲಿ ದಂತ ಕುಳಿ ತುಂಬಿಕೆ, ಹಲ್ಲಿನ ಸ್ವಚ್ಛತೆ, ಹಲ್ಲು ಕೀಳುವಿಕೆ, ಕೃತಕ ದಂತ ಜೋಡಣೆ ಇತ್ಯಾದಿ ಚಿಕಿತ್ಸೆಗಳು ಲಭ್ಯವಿರುತ್ತದೆ.

ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.

Leave a Reply

error: Content is protected !!