ಕಡಬ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಸುಧೀರ್ ಕುಮಾರ್ ಶೆಟ್ಟಿ ಆಯ್ಕೆ

ಶೇರ್ ಮಾಡಿ

ಕಡಬ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.

ಜಿಲ್ಲೆಯ ವಿವಿಧ ತಾಲೂಕುಗಳ ಅಧ್ಯಕ್ಷರ ನೇಮಕಾತಿ ಆದೇಶ ಪ್ರಕಟವಾಗಿದ್ದು, ನೂತನವಾಗಿ ಅಸ್ತಿತ್ವಕ್ಕೆ ಬಂದ ಈ ಸಮಿತಿಯ ಪ್ರಪ್ರಥಮ ಅಧ್ಯಕ್ಷರಾಗಿ ಸುಧೀರ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಬಿಳಿನೆಲೆ ಗ್ರಾಮ ಪಂಚಾಯತಿ ಸದಸ್ಯರಾಗಿ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ತನ್ನ ಸಾಮಾಜಿಕ ಸೇವೆಯ ಮೂಲಕ ಗಮನಸೆಳೆದಿರುವ ಸುಧೀರ್ ಅವರಿಗೆ ಸೂಕ್ತ ಸ್ಥಾನಮಾನ ದೊರೆತಿದ್ದು ಅವರ ಅಭಿಮಾನಿ ವರ್ಗಕ್ಕೆ ಸಂತಸ ತಂದಿದೆ.
ಬಿಳಿನೆಲೆ ಗ್ರಾಮದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕಡಬ ಬ್ಲಾಕ್ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಯಾಗಿ, ಸುಳ್ಯ ವಿಧಾನಸಭೆ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಕಡಬ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಕಾಂಗ್ರೆಸ್ ಸದಸ್ಯರಾಗಿ, ಸತತ ಮೂರು ಬಾರಿ ಗ್ರಾಮ ಪಂಚಾಯತಿ ಸದಸ್ಯರಾಗಿ ಹಾಗೂ ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.

Leave a Reply

error: Content is protected !!