ಗೋಳಿತೊಟ್ಟು: ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವನಿಗೆ ಗಾಯ

ಶೇರ್ ಮಾಡಿ

ನೆಲ್ಯಾಡಿ:ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಓರ್ವ ಪ್ರಯಾಣಿಕ ಗಾಯಗೊಂಡ ಘಟನೆ ಮಾ.14 ರಂದು ನಡೆದಿದೆ.

ಮಂಗಳೂರಿನಿಂದ ಮಾರನಹಳ್ಳಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸಹಿತ ಮೂರು ಮಂದಿ ಪೈಕಿ ಮಹಮ್ಮದ್ ಶಾಫಿ ಎಂಬವರು ತೀವ್ರವಾದ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Leave a Reply

error: Content is protected !!