ಅನಾರೋಗ್ಯ; ಚಿಕಿತ್ಸೆ ಫಲಕಾರಿಯಾಗದೇ 2ನೇ ತರಗತಿ ವಿದ್ಯಾರ್ಥಿನಿ ನಿಧನ

ಶೇರ್ ಮಾಡಿ

ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಾ.20ರ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7) ಮೃತಪಟ್ಟ ವಿದ್ಯಾರ್ಥಿನಿ.

ಶಹಿಮಾ ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಮಂಗಳೂರಿನ‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2-3 ದಿನ ಕೋಮ ವ್ಯವಸ್ಥೆಯಲ್ಲಿದ್ದರು. ನಂತರ ಹೆಚ್ಚಿನ ಚಿಕಿತ್ಸೆ ನೀಡಿದ್ದಾದ್ದರೂ ಸ್ವಲ್ಪ ಮಟ್ಟಿಗೆ ಸ್ಪಂದಿಸುತ್ತಿದ್ದರು ಎಂದು ಹೇಳುತ್ತಿದ್ದರೂ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯಿಸಿರೆಳೆದಿದ್ದಾರೆ.

ಶಹಿಮಾರ ಅಕಾಲಿಕ ನಿಧನಕ್ಕೆ ವಿದ್ಯಾಸಂಸ್ಥೆ, ತಲಪಾಡಿ ಜಮಾಅತ್ ತೀವ್ರ ಸಂತಾಪ ಸೂಚಿಸಿದೆ.

Leave a Reply

error: Content is protected !!