ಉಪ್ಪಿನಂಗಡಿ- ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್ಪ್ರೆಸ್, ಕಾಂಚನ ಮತ್ತು ವಾಟರ್ ಸಪ್ಲೈ ಫೀಡರ್ ಮತ್ತು 110/33/11ಕೆವಿ ಕಲ್ಲೇರಿ ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ & ಕೆಮ್ಮಾರ ಫೀಡರ್ನಲ್ಲಿ ಮಾ.21 ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ, 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಮತ್ತು 110/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ ಬಜತ್ತೂರು, ನೆಕ್ಕಿಲಾಡಿ ಮತ್ತು ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.