ಅಕ್ರಮ ಮದ್ಯ ಮಾರಾಟ ಪೊಲೀಸರ ದಾಳಿ

ಶೇರ್ ಮಾಡಿ

ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ, ಸ್ಥಳೀಯ ನಿವಾಸಿ ಸತೀಶ್(40) ಎಂಬಾತನು ಬುಧವಾರ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾಗ, ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಶ್ರೀಶೈಲ ಡಿ. ಮುರಗೋಡ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿ,1,312 ರೂ.ಮೌಲ್ಯದ 90 ಎಂ.ಎಲ್.ಮದ್ಯ ತುಂಬಿದ 32 ಸ್ಯಾಚೆಟ್ ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Reply

error: Content is protected !!