ಲಾವತ್ತಡ್ಕ: ಡೀಸಿಲ್ ಟ್ಯಾಂಕರ್ ಪಲ್ಟಿ: ಡೀಸಿಲ್ ಸೋರಿಕೆ- ಇಬ್ಬರಿಗೆ ಗಾಯ

ಶೇರ್ ಮಾಡಿ

ನೆಲ್ಯಾಡಿ: ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಡೀಸಿಲ್ ಟ್ಯಾಂಕರ್ ಪಲ್ಟಿಯಾಗಿ ಡೀಸಿಲ್ ಸೋರಿಕೆ ಉಂಟಾಗಿ ಇಬ್ಬರೂ ಗಾಯಗೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.

ಗಾಯಗೊಂಡವರನ್ನು ಟ್ಯಾಂಕರ್ ಡ್ರೈವರ್ ಮೋಹಿಲ್ ಮತ್ತು ಮನೀಶ್ ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಡೀಸಿಲ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಪಲ್ಟಿಯಾಗಿದ್ದು. ಕೆಲ ಹೊತ್ತು ವಾಹನ ಸಂಚಾರ ಸ್ಥಗಿತಗೊಂಡಿದೆ. ಗಾಯಗೊಂಡವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಸೂಕ್ತ ವ್ಯವಸ್ಥೆಯನ್ನು ಕೈಗೊಂಡರು.

Leave a Reply

error: Content is protected !!