ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

ಶೇರ್ ಮಾಡಿ

ಶಿಶಿಲ ಇಲ್ಲಿಯ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಶ್ರೀ ಗಡಿ ಚಾಮುಂಡಿ ಅಮ್ಮನವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮಾ.21ರಿಂದ ಪ್ರಾರಂಭಗೊಂಡು ಮಾ.24 ರವರೆಗೆ ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಕೃಷ್ಣಪ್ರಸಾದ ಉಡುಪರ ನೇತೃತ್ವದಲ್ಲಿ ನಡೆಯಲಿದೆ.

ಮಾ. 21ರಂದು ಸಂಜೆ ತಂತ್ರಿಗಳ ಹಾಗೂ ಋತ್ವಿಜರ ಆಗಮನ, ದೇವತಾ ಪ್ರಾರ್ಥನೆ, ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ರಾಕ್ಷೆಘ್ನ ಹೋಮ, ರಾತ್ರಿ ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ, ಮಹಾಪೂಜೆ, ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ಶ್ರೀನಿವಾಸ್ ಮುಡೆತ್ತಾಯ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುಬ್ರಹ್ಮಣ್ಯ ನೆಲ್ಲಿತ್ತಾಯ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪರಮೇಶ್ವರ ಗೌಡ ಮಂಡೆಕರ, ಉಪಾಧ್ಯಕ್ಷ ಹರೀಶ್ ಗೌಡ ಹೊಳೆಗಂಡಿ, ಪ್ರಧಾನ ಕಾರ್ಯದರ್ಶಿ ಧರ್ಮಪಾಲಗೌಡ, ಕಾರ್ಯದರ್ಶಿ ಪುನೀತ್ ಗೌಡ, ಕೋಶಾಧಿಕಾರಿ ಮಾಧವ ಪೂಜಾರಿ ದೇನೋಡಿ, ಸದಸ್ಯ ಕುಶಾಲಪ್ಪ ಗೌಡ ಜಿ. ಬದ್ರಿಜಾಲು ಹಾಗೂ ಆಡಳಿತ ಸಮಿತಿಯ ಸದಸ್ಯರು, ಸಲಹೆಗಾರರು, ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Leave a Reply

error: Content is protected !!