*ವಿದ್ಯಾರ್ಥಿಗಳಿಗೆ ತರಬೇತಿ ಮತ್ತು ಮಹಿಳೆಯರಿಗೆ ಗೌರವ ಪುರಸ್ಕಾರ ಪ್ರದಾನ ಕಾರ್ಯಕ್ರಮ
ಉಪ್ಪಿನಂಗಡಿ: ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ತಮ್ಮ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವ “ಫ್ಯೂಚರ್” ಅನ್ನುವ ತರಭೇತಿಯನ್ನು ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ವಿವೇಕಾನಂದ ಬಿ.ಇಡಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಡಾ| ಶೋಭಿತ ಸತೀಶ್ ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಉಪ್ಪಿನಂಗಡಿ ರೋಟರಿ ಕ್ಲಬ್ ವತಿಯಿಂದ ಮಹಿಳಾ ಸಾಧಕಿ ಉಪ್ಪಿನಂಗಡಿಯ ಪ್ರಗತಿ ಬ್ಯೂಟಿ ಪಾರ್ಲರ್ ಮಾಲಕಿ ಶ್ರೀಮತಿ ಮಾಧವಿ ಬಿ. ರೈ ಹಾಗೂ ಜೇಸಿಐ ವತಿಯಿಂದ ಉಪ್ಪಿನಂಗಡಿ ಹಾಗೂ ನೆಕ್ಕಿಲಾಡಿ ಗ್ರಾಮ ಪಂಚಾಯಿತಿಯ ಮಹಿಳಾ ಪೌರಕಾರ್ಮಿಕರಾದ ಶ್ರೀಮತಿ ಹರಿಣಿ ಮತ್ತು ಕುಮಾರಿ ಸೌಂದರ್ಯ ಇವರ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಶ್ರೀ ಸುಬ್ಬಪ್ಪ ಕೈಕಂಬ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ಸಂಯೋಜಕರಾದ ಡಾ|ಬಸಬರಾಜೇಶ್ವರಿ ದಿಡ್ಡಿಮನಿ , ಐಕ್ಯೂಎಸಿ ಸಂಯೋಜಕರಾದ ಶ್ರೀ ದಶರಥ ಕೆ.ಟಿ., ಉಪ್ಪಿನಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಅನುರಾದ ಶೆಟ್ಟಿ, ಉಪ್ಪಿನಂಗಡಿ ಜೇಸಿಐ ಘಟಕದ ಅಧ್ಯಕ್ಷರಾದ ಜೇಸಿ ಲವೀನಾ ಪಿಂಟೊ ಉಪಸ್ಥಿತರಿದ್ದರು.ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಉಪನ್ಯಾಸಕಿ ಜೇಸಿ ಶ್ರೀಮತಿ ವೀಣಾ ಕಜೆ ಹಾಗೂ ಉಪನ್ಯಾಸಕ ವೃಂದದವರು ಸಹಕರಿಸಿದರು.