ಉದನೆ: ಬಿಷಪ್ ಪೋಳಿಕಾರ್ಪೋಸ್ ಕಿಂಡರ್ ಗಾರ್ಡನ್‌ನಲ್ಲಿ ಪದವಿ ಪ್ರಧಾನ ಸಮಾರಂಭ

ಶೇರ್ ಮಾಡಿ

ನೆಲ್ಯಾಡಿ: ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಗಳು ಉದನೆ ಇದರ ಕಿಂಡರ್ ಗಾರ್ಡನ್ ಪುಟಾಣಿಗಳ ಪದವಿ ಪ್ರಧಾನ ಸಮಾರಂಭ ಇತ್ತೀಚೆಗೆ ನಡೆಯಿತು.

ಮುಖ್ಯ ಅತಿಥಿಯಾಗಿದ್ದ ರೆ.ಸಿ.ಲಿಸ್ಸ್ ಮ್ಯಾಥ್ಯೂರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪುಟಾಣಿಗಳಿಗೆ ಶುಭ ಹಾರೈಸಿದರು. ಇನ್ನೊರ್ವ ಅತಿಥಿ ರೆ.ಸಿ.ಎಲಿಝೆಟ್ ಮ್ಯಾಥ್ಯೂ ಶುಭ ಹಾರೈಸಿದರು. ಸಂಸ್ಥೆಯ ಸಂಚಾಲಕರಾದ ರೆ.ಫಾ.ಹನಿ ಜೇಕಬ್‌ರವರು ಪುಟಾಣಿಗಳಿಗೆ ಪ್ರಮಾಣ ಪತ್ರ ಹಾಗೂ ಪದಕ ನೀಡಿ ಅಭಿನಂದಿಸಿದರು. ಒಟ್ಟು 41 ಪುಟಾಣಿಗಳು ಯುಕೆಜಿ ಪದವಿ ಪಡೆದುಕೊಂಡು ಒಂದನೇ ತರಗತಿಗೆ ದಾಖಲಾಗಲು ಅರ್ಹತೆ ಪಡೆದುಕೊಂಡರು.
ಸಂಸ್ಥೆಯ ಆಡಳಿತ ಅಧಿಕಾರಿ ಜಾನ್ ಕೆ., ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮೇಹಿ ಜಾರ್ಜ್, ಸೈಂಟ್ ಆಂಟನೀಸ್ ಪ್ರೌಢಶಾಲೆಯ ಮುಖ್ಯಗುರು ಶ್ರೀಧರ ಗೌಡ, ಆಂಗ್ಲ ಮಾಧ್ಯಮ ವಿಭಾಗದ ಪ್ರಭಾರ ಮುಖ್ಯಗುರು ಯಶೋಧರ, ಕಿಂಡರ್ ಗಾರ್ಡನ್ ಮುಖ್ಯಸ್ಥೆ ಪ್ರತೀಕ್ಷಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ಸಿಬ್ಬಂದಿ ವರ್ಗ, ಪಾಲಕವೃಂದ ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಸೌಮ್ಯ ಸ್ವಾಗತಿಸಿ, ನಿಶಾ ವಂದಿಸಿದರು. ವಿಲ್ಮಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

Leave a Reply

error: Content is protected !!