ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

ಶೇರ್ ಮಾಡಿ

ಬೆಳ್ತಂಗಡಿ: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ಬೆಳ್ತಂಗಡಿ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಶೇಖರ್ ಬಂಗೇರ ಹೇರಾಜೆ(65) ಎಂಬವರು ರಸ್ತೆ ದಾಟುತ್ತಿದ್ದ ವೇಳೆ ಯುವತಿ ಚಲಾಯಿಸುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದಾರೆ, ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಸ್ಕೂಟರ್ ಸವಾರೆ ಬೆಳ್ತಂಗಡಿ ಗೇರುಕಟ್ಟೆ ನಿವಾಸಿ ಅನುಷಾ(19) ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೃತ ದುರ್ದೈವಿ ಶೇಖರ್ ಬಂಗೇರ ನಿವೃತ್ತ ವಿಜಯ ಬ್ಯಾಂಕ್ ಉದ್ಯೋಗಿಯಾಗಿದ್ದು, ಮುಗ್ಗ ಗುತ್ತು ಮನೆತನ ಟ್ರಸ್ಟ್ ಕೋಶಾಧಿಕಾರಿ, ಲಾಯಿಲ ರಾಘವೇಂದ್ರ ಮಠದ ಕೋಶಾಧಿಕಾರಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಉಪಾಧ್ಯಕ್ಷರಾಗಿದ್ದರು.

Leave a Reply

error: Content is protected !!