ನಾಳೆ(ಮಾ.30) ಪ್ರಥಮ ಪಿಯುಸಿ ಫಲಿತಾಂಶ ದಿನಾಂಕ ಪ್ರಕಟ

ಶೇರ್ ಮಾಡಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಇದೀಗ 2023-24ನೇ ಸಾಲಿನ ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಮಾಡುವ ದಿನಾಂಕವನ್ನು ಪ್ರಕಟಿಸಿದೆ. ಈ ಪರೀಕ್ಷೆ ಬರೆದವರು ತಮ್ಮ ಫಲಿತಾಂಶ ಯಾವಾಗ ಬಿಡುಗಡೆ ಆಗುವುದೋ ಎಂದು ತುದಿಗಾಲಲ್ಲಿ ಕಾದು ಕುಳಿತಿದ್ದರು. ಅದಕ್ಕೆ ಉತ್ತರ ಇದೀಗ ಸಿಕ್ಕಿದೆ.

ಮಂಡಲಿಯು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಇದೇ ಮಾರ್ಚ್‌ 30, 2024 ರಂದು ಕಾಲೇಜು ಆಡಳಿತ ಮಂಡಳಿಗಳು ತಮ್ಮ ಕಾಲೇಜುಗಳ ಸೂಚನಾ ಫಲಕದಲ್ಲಿ ಫಲಿತಾಂಶ ಬಿಡುಗಡೆ ಮಾಡಲು ನಿರ್ದೇಶನ ನೀಡಿದೆ. ಅಂದು ವಿದ್ಯಾರ್ಥಿಗಳು ತಮ್ಮ ತಮ್ಮ ಕಾಲೇಜಿನ ಸೂಚನಾ ಫಲಕದಲ್ಲಿ ರಿಸಲ್ಟ್‌ ಚೆಕ್‌ ಮಾಡಿಕೊಳ್ಳಬಹುದು. ಅಂದು ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ನಡೆಸಿಕೊಳ್ಳಲು ಕಾಲೇಜುಗಳ ಸಂಬಂಧಿಸಿದ ಸಿಬ್ಬಂದಿಗಳಿಗೆ ಸೂಚನೆಯನ್ನು ಮಂಡಲಿ ನೀಡಿದೆ.

ಅನುತ್ತೀರ್ಣರಾದವರಿಗೆ ಪೂರಕ ಪರೀಕ್ಷೆ ವೇಳಾಪಟ್ಟಿಯು ಪ್ರಕಟ
ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಪೂರಕ ಪರೀಕ್ಷೆಯನ್ನು ನಡೆಸಲು ದಿನಾಂಕಗಳನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಯನ್ನು ಮೇ 20 ರಿಂದ 31 ರವರೆಗೆ ನಡೆಸಲು ವೇಳಾಪಟ್ಟಿ ನಿಗದಿಪಡಿಸಲಾಗಿದೆ. ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರಿಸಲ್ಟ್‌ ಅನ್ನು ಜೂನ್ 06, 2024 ಪ್ರಕಟಿಸಲಾಗುತ್ತದೆ. ವಿಷಯವಾರು ಪರೀಕ್ಷೆ ದಿನಾಂಕಗಳನ್ನು ಚೆಕ್‌ ಮಾಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿರಿ.

2023-24ನೇ ಸಾಲಿನ ಪ್ರಥಮ ಪಿಯುಸಿ ಪರೀಕ್ಷೆ ಅನುತ್ತೀರ್ಣರಾದವರು ಪೂರಕ ಪರೀಕ್ಷೆ ಬರೆದು ಪಾಸಾಗಬಹುದು. ವಿಷಯವಾರು ನಿಗದಿತ ಶುಲ್ಕವನ್ನು ಪಾವತಿಸಿ ಪರೀಕ್ಷೆ ಬರೆಯಬೇಕು. ಪರೀಕ್ಷೆ ದಿನಾಂಕಗಳು, ಪರೀಕ್ಷೆ ಶುಲ್ಕದ ಮಾಹಿತಿಗಳನ್ನು ಕಾಲೇಜುಗಳ ಸೂಚನಾ ಫಲಕದಲ್ಲಿ ಹಾಕಲಾಗುತ್ತದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನಿಗದಿಯ ಪ್ರಕಾರ ದಿನಾಂಕ 20-04-2024 ರವರೆಗೆ ಪೂರಕ ಪರೀಕ್ಷೆ ಶುಲ್ಕ ಪಾವತಿ ಮಾಡಬಹುದು.

Leave a Reply

error: Content is protected !!