ಈಜಲು ಹೋದ ಯುವಕ ಮೃತ್ಯು

ಶೇರ್ ಮಾಡಿ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ನರಿಕೊಂಬು ಗ್ರಾಮದಲ್ಲಿ ನಡೆದಿದೆ. ನರಿಕೊಂಬು ಗ್ರಾಮದ ಬೀರಕೋಡಿ ನಿವಾಸಿ ಯೋಗೀಶ್ ಪೂಜಾರಿ ಅವರ ಪುತ್ರ ಆನುಶ್ ಮೃತಪಟ್ಟ ಯುವಕ.

ನರಿಕೊಂಬು ಗ್ರಾಮದ ಪೊಯಿತಾಜೆ ಎಂಬಲ್ಲಿ ಘಟನೆ ನಡೆದಿದೆ. ಭಾನುವಾರ ರಜಾದಿನವಾದ ಕಾರಣ ಅನುಶ್ ಸೇರಿ ಒಟ್ಟು 4 ಮಂದಿ ಸ್ನೇಹಿತರ ಜೊತೆಯಲ್ಲಿ ನದಿಗೆ ಈಜಲು ತೆರಳಿದ್ದರು.

ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳದವರು ಘಟನಾ ಸ್ಥಳಕ್ಕೆ ಬಂದು ಮೃತದೇಹವನ್ನು ನದಿಯಿಂದ ಮೇಲಕ್ಕೆತ್ತಿದ್ದಾರೆ.

ಬಂಟ್ವಾಳ ನಗರ ಪೊಲೀಸರು‌ ಸ್ಥಳಕ್ಕೆ ‌ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

error: Content is protected !!