ಸುಳ್ಯದ ಕವಯತ್ರಿ ಹಾಗೂ ಬರಹಗಾರ್ತಿಯಾಗಿರುವ ಡಾ. ಅನುರಾಧಾ ಕುರುಂಜಿಯವರು ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಮಾರ್ಚ್ 29, 2024 ರಂದು ಬೆಂಗಳೂರಿನ ಬಾಗಲಕುಂಟೆ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ವಿಶ್ವ ಕನ್ನಡ ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಮ್ಮೇಳನದಲ್ಲಿ ಹಮ್ಮಿಕೊಂಡ ರಾಜ್ಯ ಮಟ್ಟದ ಮಹಿಳಾ ಕವಿಗೋಷ್ಠಿಗೆ ಆಯ್ಕೆಯಾಗಿ ಸ್ವರಚಿತ ಕವನವನ್ನು ವಾಚಿಸಿದ್ದರು.
ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷರಾದ ವೈ ಬಿ ಹೆಚ್ ಜಯದೇವ್ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನದ ಸರ್ವಾಧ್ಯಕ್ಷೆ ಕಮಲ ರಾಜೇಶ್ ವೇದಿಕೆಯಲ್ಲಿದ್ದರು. ಈ ಹಿಂದೆ ಹಲವಾರು ಬಾರಿ ರಾಜ್ಯ ಹಾಗೂ ಅಂತಾರಾಜ್ಯ ಮಟ್ಟದ ಕವಿಗೋಷ್ಠಿಗಳಲ್ಲೂ ಭಾಗವಹಿಸಿರುವ ಡಾ. ಅನುರಾಧಾ ಕುರುಂಜಿಯವರು ರಾಜ್ಯ ಮಟ್ಟದ 15 ನೇ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ “ಚುಟುಕುಶ್ರೀ” ಪ್ರಶಸ್ತಿಯನ್ನು ಪಡೆದಿದ್ದರು.
ಇವರು “ಮೌನವನು ಮುರಿದಾಗ” ಎಂಬ ಕವನ ಸಂಕಲನವನ್ನು ಹೊರ ತಂದಿದ್ದು “ಜೀವನ ಪಯಣ” ಎಂಬ ಕವನ ಸಂಕಲನ ಪ್ರಕಟಣ ಹಂತದಲ್ಲಿದೆ.