ನೆಲ್ಯಾಡಿ: ಚುನಾವಣಾ ಹಬ್ಬದಲ್ಲಿ ಪಾಲ್ಗೊಳ್ಳಿ, ಮತದಾನದ ಹಕ್ಕು ಚಲಾಯಿಸಿ

ಶೇರ್ ಮಾಡಿ

ನೆಲ್ಯಾಡಿ: ಅತಿ ದೊಡ್ಡ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಾವು ಉತ್ತಮವಾಗಿ ನಡೆಯಬೇಕಾದರೆ ಉತ್ತಮ ಪ್ರತಿನಿಧಿಯನ್ನು ಆಯ್ಕೆ ಮಾಡಬೇಕು.ಅದಕ್ಕಾಗಿ ಪ್ರತಿಯೊಂದು ಮತವು ಬಹಳ ಮುಖ್ಯವಾಗುತ್ತದೆ. ಚುನಾವಣೆಯಲ್ಲಿ ನಮ್ಮ ಕರ್ತವ್ಯವನ್ನು ಪಾಲನೆ ಮಾಡುವುದು ತುಂಬಾ ಮುಖ್ಯ ಎಂದು ನೆಲ್ಯಾಡಿ ಮಂಗಳೂರು ವಿವಿ ಘಟಕ ಕಾಲೇಜಿನ ಉಪನ್ಯಾಸಕ ಡಾ.ನೂರಂದಪ್ಪ ಹೇಳಿದರು.

ನೆಲ್ಯಾಡಿಯಲ್ಲಿ ನಡೆದ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತಿ, ತಾಲೂಕು ಆಡಳಿತ, ತಾಲೂಕು ಪಂಚಾಯತಿ ಸುಳ್ಯ, ತಾಲೂಕು ಸ್ವೀಪ್ ಸಮಿತಿ ಸುಳ್ಯ, ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಏಪ್ರಿಲ್ 26ರಂದು ನಡೆಯುವ ಚುನಾವಣೆಯಲ್ಲಿ ನಿಮ್ಮ ಮತ ಚಲಾಯಿಸಿ, ನಿಮ್ಮ ಹಕ್ಕನ್ನು ಚಲಾಯಿಸಿ, ನೀವು ಅಷ್ಟೇ ಅಲ್ಲದೆ ನಿಮ್ಮ ನೆರೆಹೊರೆಯವರನ್ನು, ಸ್ನೇಹಿತರನ್ನು, ಬಂಧು ಬಳಗದವರನ್ನು ಚುನಾವಣೆಯಲ್ಲಿ ಕಡ್ಡಾಯವಾಗಿ ಮತ ಚಲಾಯಿಸಲು ತಿಳಿಸಿ ಎಂದರು.

ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ತಾಲೂಕು ಕಾರ್ಯಕ್ರಮದ ಸ್ಥಾಪಕರು ಜಗತ್, ನೆಲ್ಯಾಡಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಆನಂದ.ಎ., ಗ್ರಾಮ ಆಡಳಿತಾಧಿಕಾರಿ ಲಾವಣ್ಯ, ನೆಲ್ಯಾಡಿ ಮಂಗಳೂರು ವಿವಿ ಘಟಕ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು ಮೊದಲಾದವರು ಭಾಗವಹಿಸಿದರು.

ಮತದಾನದ ಪ್ರತಿಜ್ಞೆಯನ್ನು ನೆಲ್ಯಾಡಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಆನಂದ.ಎ., ಬೋಧಿಸಿದರು. ಸುಳ್ಯ ನೇಸರ ತಂಡದವರು ಮತದಾನ ಜಾಗೃತಿ ಅಭಿನಯ ಹಾಡನ್ನು ಪ್ರಸ್ತುತಪಡಿಸಿದರು. ಬಳಿಕ ನೆಲ್ಯಾಡಿ ಪೇಟೆಯಲ್ಲಿ ಮತದಾನ ಜಾಗೃತಿ ಜಾಥ ನಡೆಯಿತು.

Leave a Reply

error: Content is protected !!