ಉದನೆ: ಓವರ್ ಟೇಕ್ ಭರದಲ್ಲಿ ಖಾಸಗಿ ಬಸ್ ಮತ್ತು ಕಂಟೈನರ್ ಮಧ್ಯೆ ಅಪಘಾತ

ಶೇರ್ ಮಾಡಿ

ನೆಲ್ಯಾಡಿ: ಖಾಸಗಿ ಬಸ್ಸ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪದ ನೇಲ್ಯಡ್ಕದಲ್ಲಿ ಎ.3ರಂದು ಸಂಜೆ ನಡೆದಿದೆ.

ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ವರನ ಕಡೆಯ ಮದುವೆ ದಿಬ್ಬಣದ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!