ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆ – ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆ?

ಶೇರ್ ಮಾಡಿ

ಬಿಸಿಲಿನಿಂದ ಕಂಗೆಟ್ಟಿರುವ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಇನ್ನು ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದೇ ಏಪ್ರಿಲ್ 6 ರಿಂದ ನಾಲ್ಕು ದಿನ ಸಾಧಾರಣ ಮಳೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 6 ರಂದು ದಕ್ಷಿಣ‌ಕನ್ನಡ , ಬೀದರ್ ,ಕಲಬುರಗಿ, ಕೊಡಗು, ಮಂಡ್ಯ, ಮತ್ತು ಮೈಸೂರು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಮೂರು ವರ್ಷಗಳ ನಂತರ ಬೆಂಗಳೂರಿನಲ್ಲಿ ಶೂನ್ಯ ಮಳೆ ದಾಖಲು

ಏಪ್ರಿಲ್ 7ರಂದು‌, ಬೆಂಗಳೂರು, ಹಾಸನ , ಹಾಗೂ ತುಮಕೂರು ಜಿಲ್ಲೆಗಳಲ್ಲಿ ‌ಮಳೆ‌ಯಾಗಲಿದ್ದರೆ ಏಪ್ರಿಲ್ ‌9 ರಂದು ಕರವಾಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳು ಸೇರಿ 18 ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ, ಉತ್ತರ ಕರ್ನಾಟಕದಲ್ಲಿ ಮುಂದಿನ ಎರಡು ದಿನ ಉಷ್ಣಾಂಶದಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆಯಿದೆ.

Leave a Reply

error: Content is protected !!