ಬಸ್-ಪಿಕಪ್‌ ಮುಖಾಮುಖಿ ಢಿಕ್ಕಿ; ಹಲವರಿಗೆ ಗಾಯ

ಶೇರ್ ಮಾಡಿ

ವಿಟ್ಲ: ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ನಡೆದಿದೆ.

ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಕಾಂಕ್ರೀಟ್ ಹಾಕಲು ಹಲವು ಮಂದಿ ಇದ್ದರು ಎನ್ನಲಾಗಿದೆ. ಬಸ್ಸಿನ ಬೆಳಗ್ಗಿನ ಟ್ರಿಪ್ ನಲ್ಲಿ ಪ್ರಯಾಣಿಕರು ತುಂಬಿಕೊಂಡಿದ್ದರೆನ್ನಲಾಗಿದೆ.

ಹಲವರು ಗಾಯಗೊಂಡಿದ್ದು, ಹೆಚ್ಚಿನ ವಿವರ ಲಭ್ಯವಾಗಿಲ್ಲ.

Leave a Reply

error: Content is protected !!