ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಉಪನ್ಯಾಸಕರ ಅಭಿವೃದ್ಧಿ ಕಾರ್ಯಕ್ರಮ

ಶೇರ್ ಮಾಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸಂಶೋಧನಾ ಸಮಿತಿಯ ವತಿಯಿಂದ ಉಪನ್ಯಾಸಕರ ಅಭಿವೃದ್ಧಿ ಕಾರ್ಯಕ್ರಮವನ್ನುಎ.3ರಂದು ಹಮ್ಮಿಕೊಳ್ಳಲಾಯಿತು.

ವಿವೇಕಾನಂದ ಮಹಾವಿದ್ಯಾಲಯದ ಪ್ರಾಧ್ಯಾಪಕ ಅಶೇಲೆ ಡಿಸೋಜ ಮತ್ತು ಡಾ.ರಾಕೇಶ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಸಂಶೋಧನೆಯ ಬಗ್ಗೆ ವಿಶೇಷ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ದಿನೇಶ್ ಪಿ.ಟಿ, ರಿಸರ್ಚ್ ಸಮಿತಿಯ ಮುಖ್ಯಸ್ಥರಾದ ಡಾ.ಪ್ರಸಾದ್ ಎನ್ IQAC ಸಂಯೋಜಕರಾದ ಪ್ರೊಫೆಸರ್ ಲತಾ ಬಿಟಿ ಇವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನ ರಿಸರ್ಚ್ ಸಮಿತಿಯ ಸದಸ್ಯ ವಿನ್ಯಾಸ್.ಎಚ್ ಇವರು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸುಮಾರು 25 ಉಪನ್ಯಾಸಕರು ಭಾಗವಹಿಸಿದ್ದರು.

Leave a Reply

error: Content is protected !!