ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌ – ಬಿಜೆಪಿ ಕಾರ್ಯಕರ್ತನ ವಿಚಾರಣೆ

ಶೇರ್ ಮಾಡಿ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ (NIA) ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.

ಬಿಜೆಪಿ ‌ಕಾರ್ಯಕರ್ತ ಸಾಯಿಪ್ರಸಾದ್‌ನನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆ ನಡೆಸಿ ಕಳುಹಿಸಿದ್ದಾರೆ.

ಸಾಕ್ಷಿಯನ್ನಾಗಿ ಪರಿಗಣನೆ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಸಾಯಿಪ್ರಕಾಶ್‌ ಅವರನ್ನು ಎನ್‌ಐಎ ಸಾಕ್ಷಿಯನ್ನಾಗಿ ಪರಿಗಣಿಸಿದೆ.

ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಮುಜಾಮಿಲ್‌ಗೆ ಸಾಯಿ ಪ್ರಕಾಶ್‌ ಮೊಬೈಲ್‌ ಮಾರಾಟ ಮಾಡಿದ್ದ. ಮುಜಾಮಿಲ್ ಷರೀಫ್ ಪ್ರಕರಣದ ಮತ್ತೊಬ್ಬ ಆರೋಪಿ ಮುಸಾವೀರ್‌ಗೆ ಮೊಬೈಲ್ ಸಿಮ್ ಕೊಟ್ಟಿದ್ದ. ಮುಸಾವೀರ್ ಬಳಸಿದ್ದು ಇದೇ ಮೊಬೈಲ್ ಎಂಬ ಅನುಮಾನದ ಮೇಲೆ ಸೆಕೆಂಡ್‌ ಹ್ಯಾಂಡ್‌ ಮೊಬೈಲ್‌ ಮಾರಾಟ ಮಾಡುತ್ತಿದ್ದ ಸಾಯಿಪ್ರಸಾದ್ ಅವರನ್ನು ವಿಚಾರಣೆ ನಡೆಸಿದೆ.

ಮುಜಾಮಿಲ್‌ ಮೊಬೈಲ್‌ ಖರೀದಿ ಮಾಡಿದ ಹಿನ್ನೆಲೆಯಲ್ಲಿ ಎನ್‌ಐಎ ಸಾಯಿ ಪ್ರಕಾಶ್‌ ಅವರನ್ನು ಸಾಕ್ಷಿಯನ್ನಾಗಿ ಪರಿಗಣಿಸಿ ಕೆಲವೊಂದು ಮಾಹಿತಿಯನ್ನು ಪಡೆದು ಕಳುಹಿಸಿದೆ ಎಂಬ ವಿಚಾರ ಈಗ ತಿಳಿದುಬಂದಿದೆ.

Leave a Reply

error: Content is protected !!