ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿಗಳನ್ನು ಇಂದಿನಿಂದ(ಎ.5) ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 4 ಕೊನೆ ದಿನವಾಗಿದೆ. ಶುಲ್ಕ ಪಾವತಿಗೆ ಮೇ 7 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ https://karnemaka.kar.nic.in/trialrun/home.aspx ಗೆ ಸಂಪರ್ಕಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ.