ಡಾ. ಅನುರಾಧಾ ಕುರುಂಜಿಯವರಿಗೆ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವದಲ್ಲಿ ಪ್ರತಿಷ್ಠಿತ “ಶತಶೃಂಗ” ಪ್ರಶಸ್ತಿ

ಶೇರ್ ಮಾಡಿ

ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಸುಳ್ಯದ ಡಾ. ಅನುರಾಧಾ ಕುರುಂಜಿಯವರು ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನದವರು ನಡೆಸಲಿರುವ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕೋತ್ಸವ 2024ರಲ್ಲಿ ಕೊಡ ಮಾಡಲಿರುವ ಶತಶೃಂಗ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಕೊಡಲ್ಪಡುವ ಈ ಪ್ರಶಸ್ತಿಗೆ ಕೇರಳದ ನಾಲ್ವರು ಮತ್ತು ಕರ್ನಾಟಕದ ಇಬ್ಬರು ಆಯ್ಕೆಯಾಗಿದ್ದು ಸುಳ್ಯದ ಡಾ. ಅನುರಾಧಾ ಕುರುಂಜಿಯವರನ್ನು ಸಾಹಿತ್ಯಿಕ, ಶೈಕ್ಷಣಿಕ ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ಮಾಡಿರುವ ಸಾಧನೆಗಾಗಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಏಪ್ರಿಲ್ 11ರಂದು ಕಾಸರಗೋಡಿನಲ್ಲಿ ನಡೆಯಲಿರುವ ಗಡಿನಾಡ ಉತ್ಸವ ಕಾರ್ಯಕ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.

ಅದೇ ದಿನ ನಡೆಯಲಿರುವ ಅಂತಾರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಡಾ. ಅನುರಾಧಾ ಕುರುಂಜಿಯವರು ತಮ್ಮ ಸ್ವ ರಚಿತ ಕವನವನ್ನು ವಾಚಿಸಲಿದ್ದಾರೆ

Leave a Reply

error: Content is protected !!