ಹೆರಿಗೆಗೆಂದು ದಾಖಲಾದ ಮಹಿಳೆ ಸಾವು

ಶೇರ್ ಮಾಡಿ

ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾ ಗಿದ್ದ ಮಹಿಳೆಯೊಬ್ಬರು ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ತಾಲೂಕಿನ ಬದ್ಯಾರ್‌ನ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ (26) ಎರಡನೇ ಹೆರಿಗೆಗಾಗಿ ಎ.3ರಂದು ಆಸ್ಪತ್ರೆಗೆ ದಾಖಲಾ ಗಿದ್ದರು. ಎ.4ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಹೆರಿಗೆ ಅನಂತರ ವಿಪರೀತ ರಕ್ತ ಸ್ರಾವ ಉಂಟಾಗಿದ್ದು ರಾತ್ರಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದು ಇದರಿಂದ ಕುಟುಂಬಸ್ಥರು ಆಕ್ರೋಶಗೊಂಡರಲ್ಲದೇ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ.

ಕೆಲ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಅದರೆ ಈ ಬಗ್ಗೆ ಯಾವುದೇ ದೂರು ದಾಖಲಾಗಲ್ಲ ಎಂಬ ಮಾಹಿತಿಯೂ ಲಭ್ಯವಾಗಿದೆ. ಮೃತ ಮಹಿಳೆಗೆ 3 ವರ್ಷದ ಹೆಣ್ಣು ಮಗುವೊಂದಿದೆ.

Leave a Reply

error: Content is protected !!