ಗೋಳಿತ್ತೊಟ್ಟು: ಬೈಕ್‌ಗಳ ಡಿಕ್ಕಿ, ಸವಾರರಿಗೆ ಗಾಯ

ಶೇರ್ ಮಾಡಿ

ನೆಲ್ಯಾಡಿ: ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಸವಾರರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರು-ಬೆಂಗಳೂರು ರಾ.ಹೆ.75ರ ಗೋಳಿತ್ತೊಟ್ಟು ಗ್ರಾಮದ ಸಣ್ಣಂಪಾಡಿ ಎಂಬಲ್ಲಿ ಎ.6ರಂದು ಬೆಳಿಗ್ಗೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಮಂಜಲ್‌ಪಳಿಕೆ ನಿವಾಸಿಗಳಾದ ಖಲಂದರ್ ಶಾಫಿ, ಸಫ್ವಾನ್ ಹಾಗೂ ವಾಸಪ್ಪ ಗಾಯಗೊಂಡವರಾಗಿದ್ದಾರೆ. ವಾಸಪ್ಪ ಅವರು ಬೈಕ್‌ನಲ್ಲಿ (ಕೆಎ19 ಇಹೆಚ್ 3350)ಬೈಕ್‌ನಲ್ಲಿ ನೆಲ್ಯಾಡಿ-ಉಪ್ಪಿನಂಗಡಿ ಏಕಮುಖ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ನೆಲ್ಯಾಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಖಲಂದರ್ ಶಾಫಿ ಅವರು ಸವಾರನಾಗಿ, ಸಫ್ವಾನ್ ಅವರು ಸಹ ಸವಾರನಾಗಿ ಉಪ್ಪಿನಂಗಡಿ ಕಡೆಯಿಂದ ನೆಲ್ಯಾಡಿ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕ್ (ಕೆಎ 70 ಜೆ 8537) ನಡುವೆ ಡಿಕ್ಕಿ ಸಂಭವಿಸಿದೆ. ಈ ಪೈಕಿ ಖಲಂದರ್ ಶಾಫಿ ಅವರು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸಫ್ವಾನ್‌ರವರನ್ನು ಹೆಚ್ಚಿನ ಚಿಕಿತ್ಸೆ ಬಗ್ಗೆ ಪುತ್ತೂರು ಹಿತ ಆಸ್ಪತ್ರೆಗೆ ಹಾಗೂ ವಾಸಪ್ಪ ಅವರಿಗೆ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರಿನ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!