ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಖಾಸಗಿ ಬಸ್ ವಿದ್ಯುತ್ ಕಂಬವೊಂದಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿ ರಸ್ತೆ ಬ್ಲಾಕ್ ಆದ ಘಟನೆ ಮಡಿಕೇರಿ ಸಮೀಪದ ಜೋಡುಪಾಲದಲ್ಲಿ ಸೋಮವಾರ ಮುಂಜಾನೆ 5:30 ರ ವೇಳೆ ಸಂಭವಿಸಿದೆ.
ಈ ಘಟನೆಯಿಂದ ಸುಳ್ಯದಿಂದ ಮಡಿಕೇರಿ ಕಡೆ ಹೋಗುವ ಪ್ರಯಾಣಿಕರು ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುವ ಪ್ರಯಾಣಿಕರು ರಸ್ತೆ ಬ್ಲಾಕ್ ನಿಂದ ತೊಂದರೆ ಅನುಭವಿಸುತ್ತಿದ್ದಾರೆ.
ಸ್ಥಳಕ್ಕೆ ಮಡಿಕೇರಿ ಪೊಲೀಸ್ ಠಾಣಾ ಸಿಬ್ಬಂದಿಗಳು ಆಗಮಿಸಿದ್ದಾರೆ.