ಕಡಬ: ಸೈಂಟ್ ಜೋಕಿಮ್ಸ್ ನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಶೇರ್ ಮಾಡಿ

ಕಡಬ ಸೈಂಟ್ ಜೋಕಿಮ್ಸ್ ಸಭಾಭವನದಲ್ಲಿ ಏ.2ರಂದು ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವು ನಡೆಯಿತು.

ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಸಂಸ್ಥೆಯ ಸಂಚಾಲಕರಾದ ವಂದನೀಯ ಫಾದರ್ ಪ್ರಕಾಶ್ ಪೌಲ್ ಡಿಸೋಜ ರವರು ವಹಿಸಿ, ಬೇಸಿಗೆ ಶಿಬಿರ ಎಂದರೆ ಮಕ್ಕಳು ತಮ್ಮ ತಮ್ಮ ಪ್ರತಿಭೆಗಳನ್ನು ಹೊರಹಾಕಲು ಇರುವ ಒಂದು ವೇದಿಕೆ. ಬೇಸಿಗೆ ಶಿಬಿರಗಳಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ ಮಾತ್ರವಲ್ಲ, ಮನೋವಿಕಸನ ಕೂಡ ಆಗುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಕಡಬ ಪತ್ರಕರ್ತ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆ.ರವರು ಆಗಮಿಸಿ, ಕಲಕುಂಚಕ್ಕೆ ಬಣ್ಣ ಬಳಿಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಉದ್ಘಾಟನಾ ಭಾಷಣದ ಮೂಲಕ ಸ್ಪರ್ಧಾತ್ಮಕ ಯುಗದಲ್ಲಿ ಈಗಿನ ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲಿ ತಿಳುವಳಿಕೆಗಳನ್ನು ಹೊಂದಿರಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ಆಸಕ್ತಿಯನ್ನು ಹೊಂದಿರಬೇಕು. ಅಂತೆಯೇ ಸರ್ಕಾರ ಕೂಡ ನಲಿಕಲಿ ಅಂತಹ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಈ ಶಿಬಿರವು ಮಕ್ಕಳ ಮುಂದಿನ ಜೀವನಕ್ಕೆ ಸಹಕಾರಿಯಾಗಲಿ ಮತ್ತು ಶಿಬಿರದ ಕಲಿಕೆಗಳನ್ನು ಮಕ್ಕಳು ಸದುಪಯೋಗಪಡಿಸಿಕೊಳ್ಳಿ ಎಂದು ಶುಭ ಹಾರೈಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಅಮಿತ್ ಪ್ರಕಾಶ್ ರೋಡ್ರಿಗಸ್ ವಿಧ್ಯಾರ್ಥಿಗಳಿಗೆ ಶಿಬಿರದ ರೀತಿ ನಿಯಮಗಳನ್ನು ವಿವರಿಸಿದರು. ವೇದಿಕೆಯಲ್ಲಿ ಜೋಕಿಮ್ಸ್ ಪ್ರೌಢಶಾಲಾ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ಪೂರ್ಣಿಮಾ ಮತ್ತು ಸೈಂಟ್‌ ಆನ್ಸ್ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ದಕ್ಷರವರು ಉಪಸ್ಥಿತರಿದ್ದರು.

ಸಹ ಶಿಕ್ಷಕಿ ಶಾಂತಿ ಪ್ರಿಯಾ ಡಿಸೋಜ ರವರು ಸ್ವಾಗತಿಸಿ. ಭವಾನಿಯವರು ವಂದಿಸಿದರು. ಕಾರ್ಯಕ್ರಮವನ್ನು ಸಹ ಶಿಕ್ಷಕಿ ಲೋಲಾಕ್ಷಿ ಯವರು ನಿರೂಪಿಸಿದರು.

Leave a Reply

error: Content is protected !!