ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜಿಗೆ ಶೇ.100 ಫಲಿತಾಂಶ

ಶೇರ್ ಮಾಡಿ

ನೆಲ್ಯಾಡಿ: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ನೆಲ್ಯಾಡಿ ಸಂತ ಜಾರ್ಜ್ ಪ.ಪೂ.ಕಾಲೇಜಿಗೆ ಶೇ.100 ಫಲಿತಾಂಶ ಲಭಿಸಿದೆ.

ಸಂಸ್ಥೆಯಲ್ಲಿ ಕಲಾ ಹಾಗೂ ವಾಣಿಜ್ಯ ವಿಭಾಗಗಳಿದ್ದು ಒಟ್ಟು 108 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ.100 ಫಲಿತಾಂಶ ಬಂದಿದೆ. 32 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 70 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

ವಾಣಿಜ್ಯ ವಿಭಾಗ:
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 62 ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ.100 ಫಲಿತಾಂಶ ಬಂದಿದೆ. 22 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 38 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.ಕೀರ್ತನ್.ಕೆ. 579, ಲಿಖಿತಾ 578, ಮೈತ್ರಿ 576, ಶಾಜಿ 565, ರೇಷ್ಮಾ ಬಾನು 563, ತೇಜಸ್ವಿನಿ 562, ಚಿಂತನಾ 554, ಹಪ್ಸ 553, ಮೇಘನಾ 551, ಆಯಿಷಾತ್ ಶಫಾನ 544, ತೃಪ್ತಿ 541, ಯಶ್ವಿತಾ 535, ಸುಷ್ಮಾ 535, ಶಶಾಂಕ 534, ಯಶಸ್ವಿ 533, ಮಹಮ್ಮದ್ ಸಲ್ಮಾನ್ 531, ಫಾತಿಮತ್ ಮೈಮನ 530, ಇರ್ಫಾನ್ 526, ಆಶಿಕ್ 521,ಶ್ರೇಯಸ್ 518, ಪಾತಿಮತ್ ಸಂಶೀನಾ 516, ಶರತ್ ಕುಮಾರ್ 511 ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ.

ಕಲಾ ವಿಭಾಗ:
ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 46 ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ.100 ಫಲಿತಾಂಶ ಬಂದಿದೆ. 10 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ನಾಲ್ವರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಹೇಮಲತಾ 565, ರಿಕ್ಷಿತ 554, ಮಹಮ್ಮದ್ ಸುಹೈಲ್ 552, ಲಯಾ ಬಿನೋಜ್ 550, ಅಫ್ರೀನ 546, ಕೀರ್ತನ್. ಪಿ,545, ಪೂಜಾ.ಆರ್ 529, ನಿಶ್ಮಿತಾ.ಒ 526, ಆಫಿಯಾ ಬಾನು 516, ದೀಪಿಕ 514 ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಸಂತಜಾರ್ಜ್ ವಿದ್ಯಾಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್, ಸಂಸ್ಥೆಯ ಸಂಚಾಲಕರಾದ ರೆ.ಫಾ.ನೋ ಮಿಸ್ ಕೊರಿಯಾಕೋಸ್, ಕಾಲೇಜಿನ ಪ್ರಾಚಾರ್ಯರಾದ ಏಲಿಯಾಸ್.ಎಂ.ಕೆ. ಅವರು ತಿಳಿಸಿದ್ದಾರೆ. ಅವರು ತಿಳಿಸಿದ್ದಾರೆ.

Leave a Reply

error: Content is protected !!