ಶಿರಾಡಿ ಉಗ್ರಾಣಿಗುತ್ತು ನಿವಾಸಿ ಜೋನ್ ಹೃದಯಾಘಾತದಿಂದ ನಿಧನ

ಶೇರ್ ಮಾಡಿ

ನೆಲ್ಯಾಡಿ: ರಾತ್ರಿ ಊಟ ಮಾಡಿ ಮಲಗಿದ್ದ ವ್ಯಕ್ತಿಯೋರ್ವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದಲ್ಲಿ ನಡೆದಿದೆ. ಶಿರಾಡಿ ಗ್ರಾಮದ ಉಗ್ರಾಣಿಗುತ್ತು ನಿವಾಸಿ ಜೋನ್(51ವ.)ಮೃತಪಟ್ಟವರಾಗಿದ್ದಾರೆ.

ಜೋನ್ ಅವರು ಎ.11ರಂದು ರಾತ್ರಿ 10 ಗಂಟೆಗೆ ಮನೆಯಲ್ಲಿ ಊಟ ಮಾಡಿ ಮಲಗಿದ್ದವರು ಎ.12ರಂದು ಬೆಳಿಗ್ಗೆ 8 ಗಂಟೆಯಾದರೂ ಏಳದೇ ಇದ್ದ ಹಿನ್ನೆಲೆಯಲ್ಲಿ ಮನೆಯವರು ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿ ಜೋನ್ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎಂದು ವರದಿಯಾಗಿದೆ. ಜೋನ್ ಹೃದಯಾಘಾತದಿಂದ ಅಥವಾ ಇನ್ಯಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿ ಅವರ ತಂದೆ ಎ.ಜೆ.ಚಾಕೋ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!