ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಶೇರ್ ಮಾಡಿ

ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಗೆ ಬಿದ್ದು ಬೆಂಗಳೂರಿನ ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದಲ್ಲಿ ಸಂಭವಿಸಿದೆ.

ಬೆಂಗಳೂರು ಸುಂಕದಕಟ್ಟೆಯ ಮಂಜುನಾಥ ಮೃತರು. ಎ.22ರಂದು ಮಂಜುನಾಥ ಅವರು ಪತ್ನಿ ಜತೆ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರಯಾಣಿಸಿದ್ದರು. ಬಸ್‌ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ತಲಪುವಾಗ ಚಾಲಕ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ್ದರಿಂದ ಮತ್ತು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೇ ಇದ್ದುದರಿಂದ ಮಂಜುನಾಥ ಅವರು ಕೆಳಗೆ ಬಿದ್ದು ಗಂಭೀರ ಗಾಯಗೊಂಡರು.

ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!