ಏ.26, ಮತದಾನ ದಿನದಂದು ರಾಜ್ಯದಲ್ಲಿ ಯಾವುದಕ್ಕೆಲ್ಲಾ ರಜೆ?

ಶೇರ್ ಮಾಡಿ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದೆ. ಕರ್ನಾಟಕವೂ ಸೇರಿದಂತೆ 13 ರಾಜ್ಯಗಳಲ್ಲಿ ಶುಕ್ರವಾರ ಮತದಾರರು ಮತ ಚಲಾಯಿಸಲಿದ್ದಾರೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದರಲ್ಲಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳೂ ಒಳಗೊಂಡಿವೆ. ಮತದಾನದ ದಿನದಂದು ಮತದಾನವನ್ನು ಕಡ್ಡಾಯವಾಗಿ ಮಾಡಬೇಕೆಂಬ ಅಲಿಖಿತ ನಿಯಮ ಇದೆ. ಅದರಂತೆ ಹೆಚ್ಚಿನ ಸಂಖ್ಯೆಯಲ್ಲಿ ಅಂದು ರಜೆ ಇರುತ್ತದೆ.

ಏಪ್ರಿಲ್ 26ರಂದು ಕರ್ನಾಟಕದಲ್ಲಿ ಯಾವುದಕ್ಕೆ ರಜೆ?
ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಏಪ್ರಿಲ್ 26, ಶುಕ್ರವಾರ ರಜೆ ಇರುತ್ತದೆ.
ಬ್ಯಾಂಕುಗಳಿಗೆ ರಜೆ
ಶಾಲೆ, ಕಾಲೇಜುಗಳಿಗೆ ರಜೆ
ಹೈಕೋರ್ಟ್ ನ್ಯಾಯಪೀಠಗಳಿಗೆ ರಜೆ

ಏಪ್ರಿಲ್ 26ರಂದು ಯಾವುವೆಲ್ಲಾ ಇರುತ್ತೆ?
ಆಸ್ಪತ್ರೆ, ಅಂಗಡಿ ಮುಂಗಟ್ಟುಗಳು ತೆರೆದಿರುತ್ತವೆ
ಬಸ್, ರೈಲು ಇತ್ಯಾದಿ ಸಾರಿಗೆ ವಾಹನಗಳ ಸಂಚಾರ ಇರುತ್ತದೆ
ಖಾಸಗಿ ಸಂಸ್ಥೆಗಳು ತೆರೆದಿರುತ್ತವೆ
ಇಲ್ಲಿ ಖಾಸಗಿ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ವೋಟಿಂಗ್ ಮಾಡಲು ಅನುಕೂಲ ಮಾಡಿಕೊಡಬೇಕಾಗುತ್ತದೆ. ಉದ್ಯೋಗಿಗಳು ವೋಟ್ ಹಾಕಿ ಕಚೇರಿ ಹೋಗಬಹುದು. ಮೊದಲ ಪಾಳಿ ಇದ್ದರೆ ಕಚೇರಿ ಕೆಲಸ ಮುಗಿಸಿ ಸಂಜೆ ವೋಟ್ ಹಾಕಬಹುದು.

ಮದ್ಯ ಮಾರಾಟ ನಿಷೇಧ
ಇವತ್ತು ಏಪ್ರಿಲ್ 24, ಸಂಜೆ 5 ಗಂಟೆಯಿಂದ ಏಪ್ರಿಲ್ 26 ಮಧ್ಯರಾತ್ರಿ 12ರವರೆಗೆ ಮದ್ಯದ ತಯಾರಿಕೆ, ಮಾರಾಟ, ವಿತರಣೆ, ಸಾಗಣೆ, ಸಂಗ್ರಹಣೆಯನ್ನು ನಿಷೇಧಿಸಲಾಗಿದೆ. ಇದೇ ಅವಧಿಯಲ್ಲಿ ಬೆಂಗಳೂರಿನಲ್ಲಿ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಏಪ್ರಿಲ್ 26ರಂದು ರಾಜ್ಯದ ಯಾವೆಲ್ಲಾ ಕ್ಷೇತ್ರಗಳಿಗೆ ಚುನಾವಣೆ?
ಬೆಂಗಳೂರು ಉತ್ತರ
ಬೆಂಗಳೂರು ಕೇಂದ್ರ
ಬೆಂಗಳೂರು ದಕ್ಷಿಣ
ಬೆಂಗಳೂರು ಗ್ರಾಮಾಂತರ
ಕೋಲಾರ
ಚಿಕ್ಕಬಳ್ಳಾಪುರ
ತುಮಕೂರು
ಮಂಡ್ಯ
ಮೈಸೂರು
ಹಾಸನ
ತುಮಕೂರು
ಚಿತ್ರದುರ್ಗ
ಉಡುಪಿ ಚಿಕ್ಕಮಗಳೂರು
ದಕ್ಷಿಣ ಕನ್ನಡ
ಇನ್ನುಳಿದ 14 ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ಕ್ಕೆ ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ
.

Leave a Reply

error: Content is protected !!