ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ: ಅಧ್ಯಯನ ವಿನಿಮಯ ಕಾರ್ಯಕ್ರಮ

ಶೇರ್ ಮಾಡಿ

ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ಮತ್ತು ಉದ್ಯಮಾಡಳಿತ ವಿಭಾಗವು ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಆಶ್ರಯದಲ್ಲಿ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದೊಂದಿಗೆ ಮಾಡಿಕೊಂಡ ಎಂ.ಓ.ಯು.ಪ್ರಕಾರ ಅಧ್ಯಯನ ವಿನಿಮಯ ಕಾರ್ಯಕ್ರಮ ಮಹಾವಿದ್ಯಾಲಯದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ಇಲ್ಲಿನ 10 ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಂದ ವಿವಿಧ ವಿಷಯಗಳಾದ ನಾಯಕತ್ವ ಕಲೆ, ಸಂವಹನ ಕಲೆ, ಸೃಜನಶೀಲತೆ ಮತ್ತು ಸಮಯ ನಿರ್ವಹಣೆ ಬಗ್ಗೆ ತಮ್ಮ ವಿಚಾರಗಳನ್ನು ಮಂಡಿಸಿದರು. ಕಾರ್ಯಕ್ರಮದಲ್ಲಿ ಪ್ರಭಾರ ಪ್ರಾಂಶುಪಾಲರಾದ ಡಾ.ದಿನೇಶ.ಕೆ,ಐಕ್ಯೂಎಸಿ ಸಂಯೋಜಕರಾದ ಶ್ರೀಮತಿ ಲತಾ ಬಿಟಿ ಕಾರ್ಯಕ್ರಮದ ಸಂಯೋಜಕರಾದ ಶಿವಪ್ರಸಾದ್ ಎಸ್ ಹಾಗೂ ಶ್ರೀರಾಮ ಪದವಿ ಮಹಾವಿದ್ಯಾಲಯದ ಉಪನ್ಯಾಸಕರಾದ ಹರ್ಷಿತ್ ಕುಮಾರ್ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಕೌಶಿಕ್ ಉಪಸ್ಥಿತರಿದ್ದರು

ಶ್ರೀರಾಮ ಪದವಿ ಮಹಾವಿದ್ಯಾಲಯ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿಗಳಾದ ನಾಮದೇವ್ ಭೂಮಿಕ, ಪ್ರತಿಕ್ಷಾ.ಕೆ, ಪ್ರತಿಕ್ಷಾ, ನಿಶ್ವಿತಾ, ಪಲ್ಲವಿ, ಲಕ್ಷಮಿತಾ,,ಪೂರ್ಣಿಮಾ, ವಿಸ್ಮಿತ ಪುನೀತ ಕಾರ್ಯಕ್ರಮ ಸಂಯೋಜಕರಾದ ಶಿವಪ್ರಸಾದ್.ಎಸ್ ಸ್ವಾಗತಿಸಿ. ವಿದ್ಯಾರ್ಥಿ ಕೌಶಿಕ್ ಧನ್ಯವಾದಗೈದರು. ಕುಮಾರಿ ಭಾರತಿ ಕಾರ್ಯಕ್ರಮ ನಿರೂಪಿಸಿದರು. ಎರಡು ಮಹಾವಿದ್ಯಾಲಯದ ನಡುವೆ ಕಳೆದ ಅಕ್ಟೋಬರ್ ತಿಂಗಳಲ್ಲಿ ಎಂ ಓ ಯು ಒಡಂಬಡಿಕೆ ನಡೆದಿತ್ತು

Leave a Reply

error: Content is protected !!