ಬಸ್‌ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನ ಅನುಚಿತ ವರ್ತನೆ-ದೂರು ದಾಖಲು

ಶೇರ್ ಮಾಡಿ

ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಸಮೀಪದ ಫರಿಂಗಿಪೇಟೆಯಲ್ಲಿರುವ ತನ್ನ ಮನೆಗೆ ಖಾಸಗಿ ಬಸ್ಸೊಂದರಲ್ಲಿ ಬರುತ್ತಿದ್ದ ಯುವತಿಯೊಂದಿಗೆ ಬಸ್‌ ನಲ್ಲಿದ್ದ ಯುವಕನೋರ್ವ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಬೆಳಗ್ಗಿನ ಜಾವ ಬಸ್ ಗುಂಡ್ಯ ತಲುಪಿದ್ದಂತೆ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಇದರಿಂದ ನೊಂದ ಯುವತಿ ಉಪ್ಪಿನಂಗಡಿ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆಗೆ ಸಂಬಂಧಸಿದಂತೆ ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ರಾಜಕೀಯ ಲಾಭಕ್ಕಾಗಿ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದನ್ನು ಕಂಡುಬಂದಿದ್ದು ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿರುತ್ತದೆ ಹಾಗೂ ಇಂತಹ ಸುಳ್ಳು ಸುದ್ದಿಗಳಿಂದ ಸಾಮಾಜಿಕ ಸ್ವಾಸ್ಥ್ಯವನ್ನು ಕೆಡಿಸುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಗೊಡದಂತೆ ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!