ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ

ಶೇರ್ ಮಾಡಿ

ಮಂಗಳೂರು ನಗರದ ಕಪಿತಾನಿಯೋ ಮತದಾನ ಕೇಂದ್ರದ ಎದುರು ಮಾಧ್ಯಮದ ಜತೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮಾತನಾಡುತ್ತಿದ್ದಾಗ ಆಕ್ಷೇಪಿಸಿದ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ಜತೆ ವಾಗ್ವಾದ, ಘರ್ಷಣೆ ನಡೆಯಿತು. ಪೊಲೀಸರು ಕಾರ್ಯಕರ್ತರನ್ನು ಚದುರಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಂಡಿದ್ದರು. ಆಗ ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಅಧಿಕಾರಿ ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ಬೆಳೆಸಿದ್ದಾನೆ. ಆಗ ಪೊಲೀಸ್ ಅಧಿಕಾರಿ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮದ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಕೊಂಚ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

Leave a Reply

error: Content is protected !!