ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ.ಶ್ರೀನಿವಾಸ ಪ್ರಸಾದ್
ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಂಸದರು ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಡಾ.ಸುದರ್ಶನ್ ಬಲ್ಲಾಳ್ ರಿಂದ ಚಿಕಿತ್ಸೆ ನೀಡಲಾಗ್ತಾ ಇತ್ತು. ಆದರೆ ಇಂದು ನಸುಕಿನ ಜಾವ 1.27ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ರಾಜಕೀಯದ ಏಳು-ಬೀಳುಗಳ ನಡುವೆ ಸ್ವಾಭಿಮಾನಕ್ಕೆ ಹೆಸರಾಗಿದ್ದ 76 ವರ್ಷದ ಶ್ರೀನಿವಾಸ ಪ್ರಸಾದ್ ಅವರು ಕಳೆದ ತಿಂಗಳು ರಾಜಕೀಯದಿಂದ ನಿವೃತ್ತಿ ಪಡೆದಿದ್ದರು. ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಸಂಸದರು, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ್ದಾರೆ. 2013 ರಿಂದ 2016 ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ಪರ್ಧಿಸಿ 11 ಬಾರಿ ಜಯಗಳಿಸಿದ್ದಾರೆ.
ಪ್ರಸಾದ್ ಅವರಿಗೆ ಪ್ರತಿಮಾ ಪ್ರಸಾದ್, ಪೂರ್ಣಿಮಾ ಪ್ರಸಾದ್ ಮತ್ತು ಪೂನಂ ಪ್ರಸಾದ್ ಎಂಬ ಮೂರು ಜನ ಹೆಣ್ಣು ಮಕ್ಕಳು ಇದ್ದಾರೆ.