ಹೃದಯಾಘಾತ; ಯುವಕ ಸಾವು

ಶೇರ್ ಮಾಡಿ

ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು(27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ.

ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದ ಅವರು ಕೆಲಸಕ್ಕೆ ರಜೆ ಹಾಕಿ ಮನೆಯಲ್ಲೇ ಇದ್ದರು. ಅವರ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು, ಸಂಜೆ ಬಂದು ನೋಡಿದಾಗ ಅವರು ಮಲಗಿದ್ದಲ್ಲೇ ಮೃತಪಟ್ಟಿರುವುದು ತಿಳಿದುಬಂದಿತ್ತು. ಅವರು ಶ್ರೀ ದುರ್ಗಾ ಭಜನ ಮಂಡಳಿ ದುರ್ಗಾಗಿರಿ ಮತ್ತು ಶ್ರೀ ದುರ್ಗಾ ಯುವಕ ಮಂಡಲ ದುರ್ಗಾಗಿರಿ ಇದರ ಸಕ್ರಿಯ ಸದಸ್ಯರಾಗಿದ್ದು, ವಿವಿಧ ಸಮಾಜಮುಖೀ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಮೃತರು ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.

Leave a Reply

error: Content is protected !!