ಧರ್ಮಸ್ಥಳದಲ್ಲಿ ಸರಣಿ ಅಪಘಾತ: ಹಲವು ವಾಹನಗಳು ಜಖಂ

ಶೇರ್ ಮಾಡಿ

ಧರ್ಮಸ್ಥಳದಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಹಲವು ವಾಹನಗಳು ಜಖಂಗೊಂಡಿರುವ ಘಟನೆ ಸೋಮವಾರ ಸಂಜೆಯ ಸುಮಾರಿಗೆ ನಡೆದಿದೆ.

ರಿಕ್ಷವೊಂದು ಮಗುಚಿ ಬಿದ್ದಾಗ ಅದರ ಹಿಂದೆ ಬರುತ್ತಿದ್ದ ರಿಕ್ಷಾ ಹಾಗೂ ಕಾರುಗಳು ಒಂದಕ್ಕೊಂದು ಢಿಕ್ಕಿ ಹೊಡೆದಿವೆ. ಎರಡು ರಿಕ್ಷಾ ಹಾಗೂ ಮೂರು ಕಾರುಗಳು ಜಖಂಗೊಂಡಿವೆ. ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಉಳಿದಂತೆ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಸೋಮವಾರ ನಾಲ್ಕು ಗಂಟೆಯ ಸುಮಾರಿಗೆ ನೇತ್ರಾವತಿಯಿಂದ ಧರ್ಮಸ್ಥಳಕ್ಕೆ ಬರುವ ರಸ್ತೆಯಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅದರ ಹಿಂದೆ ಇದ್ದ ರಿಕ್ಷಾವೊಂದು ಅಪಘಾತ ಸಂಭವಿಸಿದ ರಿಕ್ಷಾಕ್ಕೆ ತಾಗಿ ಜಖಂಗೊಂಡಿದೆ. ವೇಗವಾಗಿ ಬರುತ್ತಿದ್ದ ಕಾರು ಮಗುಚಿ ಬಿದ್ದ ರಿಕ್ಷಾಕ್ಕೆ ಢಿಕ್ಕಿಹೊಡೆದಿದೆ. ಅದರ ಹಿಂದಿನಿಂದ ಬರುತ್ತಿದ್ದ ಎರಡು ಕಾರುಗಳು ಒಂದರ ಹಿಂದೆ ಒಂದರಂತೆ ಢಿಕ್ಕಿ ಹೊಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!