ವ್ಯಕ್ತಿಯ ಮೃತದೇಹ ಪತ್ತೆ

ಶೇರ್ ಮಾಡಿ

ಬಿ.ಸಿ.ರೋಡ್ – ತಲಪಾಡಿ ಸಮೀಪದ ಬಂಟರ ಭವನದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.

ಮೃತರನ್ನು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮೃತದೇಹವು ಭವನದ ಕಂಪೌಂಡ್ ನ ಒಳಭಾಗದಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿತ್ತೆನ್ನಲಾಗಿದೆ. ಕಂಪೌಂಡ್ ಹೊರಗಡೆ ಸಂತೋಷ್ ಅವರ ಬೈಕ್ ಪತ್ತೆಯಾಗಿದೆ.

ಸಾವಿಗೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ಪೊಲೀಸ್ ಮೂಲಗಳ ಪ್ರಕಾರ ಸಂತೋಷ್ ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತುಕೊಂಡಿದ್ದು, ಆ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿರಬಹುದೆಂದು ಎಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ನಿರೀಕ್ಷಕ ಶಿವಕುಮಾರ್, ಠಾಣಾಧಿಕಾರಿ ಹರೀಶ್ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Leave a Reply

error: Content is protected !!