ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಶೇರ್ ಮಾಡಿ

ಕರೆಯೋಲೆ ಇಲ್ಲದೇ ಮದುವೆ ಸಮಾರಂಭಕ್ಕೆ ಬಂದಿದ್ದ ಇಬ್ಬರು ಕದ್ದು ಮುಚ್ಚಿ ಸಿಕ್ಕ ಸಿಕ್ಕ ಹುಡುಗಿಯರ ಫೋಟೋ ಕ್ಲಿಕ್ಕಿಸಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದು, ಅಲ್ಲಿದ್ದವರಿಂದ ಧರ್ಮದೇಟು ತಿಂದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಸಂತ್ರಸ್ತ ಮಹಿಳೆಯೊಬ್ಬರ ಫೇಸ್‌ಬುಕ್‌ ಪೋಸ್ಟ್‌ ವೈರಲ್‌ ಆಗಿದೆ.

ಪುತ್ತೂರು ಕಾವು ದೇವಸ್ಥಾನವೊಂದರ ಸಭಾಭವನದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಸಂಬಂಧವೇ ಇಲ್ಲದ ಅಪರಿಚಿತ ವ್ಯಕ್ತಿಗಳಿಬ್ಬರು ಬಂದು ಹುಡುಗಿಯರ ಫೋಟೋ ತೆಗೆಯುತ್ತಿದ್ದರು. ಇದನ್ನು ಗಮನಿಸಿದ ಮಹಿಳೆಯೊಬ್ಬರು ಅಪರಿಚಿತ ವ್ಯಕ್ತಿಯೊಬ್ಬರ ಮೊಬೈಲ್‌ ಕಸಿದುಕೊಂಡಿದ್ದಾರೆ. ಪರಿಶೀಲಿಸಿದಾಗ ಗ್ಯಾಲರಿಯಲ್ಲಿ ನೂರಾರು ಹುಡುಗಿಯರ ಪೋಟೋ ಇರುವುದು ಬೆಳಕಿಗೆ ಬಂದಿದೆ.

ಈ ಕುರಿತು ನೆರೆದಿದ್ದವರು ವಿಚಾರಿಸಿದಾಗ ಸಂಪ್ರದಾಯಸ್ಥರೊಬ್ಬರ ಪುತ್ರ ಹೇಳಿದ್ದಕ್ಕಾಗಿ ಫೋಟೋ ಕ್ಲಿಕ್ಕಿಸಿದ್ದೇವೆ ಎಂದು ಹೇಳಿದ್ದಾರೆ. ಏಟು ತಿಂದವರು ತಪ್ಪೊಪ್ಪಿಕೊಂಡು ಕಾಲ್ಕಿತ್ತಿದ್ದಾರೆ.

Leave a Reply

error: Content is protected !!