ಎಸ್.ಎಸ್.ಎಲ್.ಸಿ ಫಲಿತಾಂಶ: ನೆಲ್ಯಾಡಿ ಶ್ರೀರಾಮ ವಿದ್ಯಾಲಯ ಸೂರ್ಯನಗರ ಶೇ.100 ಫಲಿತಾಂಶ

ಶೇರ್ ಮಾಡಿ

ನೆಲ್ಯಾಡಿ: 2023-24 ರ ವಾರ್ಷಿಕ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ನೆಲ್ಯಾಡಿ ಶ್ರೀರಾಮ ವಿದ್ಯಾಲಯ ಸೂರ್ಯನಗರ ಶೇಕಡಾ 100% ಫಲಿತಾಂಶದೊಂದಿಗೆ ಶೈಕ್ಷಣಿಕ ಸಾಧನೆಗೈದಿರುತ್ತಾರೆ.

ಪರೀಕ್ಷೆಗೆ ಹಾಜರಾದ 18 ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 9 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ, 2 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಪ್ರತೀಕ್ಷ(577), ಭೂಮಿಕಾ(569), ಲಿತೇಶ್(545) ಅಂಕ ಪಡೆದುಕೊಂಡ ಸಂಸ್ಕಾರಯುತ ಶಿಕ್ಷಣದೊಂದಿಗೆ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೂ, ಅಂಕ ಪಡೆದುಕೊಂಡು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳನ್ನು ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಅಭಿನಂದಿಸಿರುತ್ತಾರೆ.

Leave a Reply

error: Content is protected !!