ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿ ಮುಸ್ತಫಾ ಪೈಚಾರು ಬಂಧನ

ಶೇರ್ ಮಾಡಿ

ರಾಷ್ಟ್ರೀಯ ತನಿಖಾ ದಳದ(ಎನ್‌ ಐ ಎ) ಅಧಿಕಾರಿಗಳು ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಮುಸ್ತಫಾ ಪೈಚಾರು ಎಂಬವರನ್ನು ಸಕಲೇಶಪುರದಲ್ಲಿ ಬಂಧಿಸಿದೆ ಎಂದು ತಿಳಿದುಬಂದಿದೆ.

ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಅವರನ್ನು 2022 ಜುಲೈ 26ರಂದು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಆರೋಪಿ ಮುಸ್ತಫಾ ಪೈಚಾರಿಗೆ ಎನ್‌ ಐ ಎ ಲುಕ್‌ ಔಟ್‌ ನೋಟೀಸ್‌ ಹೊರಡಿಸಿದ್ದು, ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Leave a Reply

error: Content is protected !!