ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೃಢ ಕಲಶ

ಶೇರ್ ಮಾಡಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನದಲ್ಲಿ ಮೇ 11ರಂದು ನೀಲೇಶ್ವರ ಅಲಂಬಾಡಿ ಪದ್ಮನಾಭಾ ತಂತ್ರಿಗಳ ನೇತೃತ್ವದಲ್ಲಿ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ, ಶ್ರೀ ಗಣಪತಿ ದೇವರಿಗೆ ದೃಢ ಕಲಶ, ನಾಗ ದೇವರ ಸನ್ನಿಧಿಯಲ್ಲಿ ತನುಸರ್ಪಣೆ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಮೇ.10 ರಂದು ಸಂಜೆ ವಾಸ್ತುರಕ್ಸೋಘ್ನ ಹೋಮ, ಮೇ 11ರಂದು ಬೆಳಿಗ್ಗೆ ಗಣಹೋಮ, ಬಿಂಬ ಶುದ್ದಿ, ಕಲಶ ಪೂಜೆ, ಕಲಶಾಭಿಷೇಕ, ಮದ್ಯಾಹ್ನ ಮಹಾಪೂಜೆ, ನಾಗ ದೇವರಲ್ಲಿ ತನುತರ್ಪಣೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.

ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ.ಕೆ.ಧನಂಜಯ ರಾವ್, ಪ್ರಧಾನ ಕಾರ್ಯದರ್ಶಿ ದಾಸಪ್ಪ ಗೌಡ ಕಾಂಜಾನು, ಆಡಳಿತಾಧಿಕಾರಿ ಮೋಹನ ಬಂಗೇರ, ಜೀರ್ಣೋದ್ದಾರ ಸಮಿತಿಯ ಕಾರ್ಯಾಧ್ಯಕ್ಷ ಬಿ.ಕೆ.ರಾಜಶೇಖರ ರಾವ್, ಪ್ರಧಾನ ಕಾರ್ಯದರ್ಶಿ ಡಿ.ದಿನೇಶ್ ಗೌಡ, ಕೋಶಾಧಿಕಾರಿ ಕೆ.ವಾಸುದೇವ ರಾವ್ ಕಕ್ಕೆನೇಜಿ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯಚಂದ್ರ ಸೇನೆರೆಬೆಟ್ಟು, ಕಾರ್ಯದರ್ಶಿ ಜ್ಯೋತಿಲಕ್ಷ್ಮಿ ಕಿಲ್ಲೂರು, ಜೀರ್ಣೋದ್ದಾರ, ಬ್ರಹ್ಮಕಲಶೋತ್ಸವ ಸಮಿತಿಯ ಸದಸ್ಯರು, ಅರ್ಚಕರು, ಊರವರು, ಭಕ್ತರು ಹಾಜರಿದ್ದರು.

Leave a Reply

error: Content is protected !!