ನೆಲ್ಯಾಡಿ: ತೆಂಕು ಮತ್ತು ಬಡಗು ತಿಟ್ಟುಗಳ ಮೇಳಗಳಲ್ಲಿ 47 ವರ್ಷಗಳ ತಿರುಗಾಟ ಮಾಡಿದ ಅಪೂರ್ವ ಸ್ತ್ರೀ ವೇಷದಾರಿ ಅಂಬಾಪ್ರಸಾದ್ ಪಾತಾಳ ಅವರಿಗೆ 60ರ ಅಭಿನಂದನ ಕಾರ್ಯಕ್ರಮವು ಪಾತಾಳ ಪೂರ್ಣ ಶ್ರೀನಿಲಯದಲ್ಲಿ ಜರಗಿತು.
ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ವತಿಯಿಂದ ಮಾಜಿ ತಾಲೂಕು ಪಂಚಾಯತ್ ಸದಸ್ಯ ಉಮೇಶ ಶೆಣೈ ಮತ್ತು ಗುರಿಕಾರ ಸತ್ಯನಾರಾಯಣ ಭಟ್ ಆರ್ಲ, ನಿವೃತ್ತ ಮುಖ್ಯ ಗುರುಗಳಾದ ಬಿ.ಸುಬ್ರಮಣ್ಯರಾವ್ ಪಾತಾಳ ಅಂಬಾಪ್ರಸಾದ್ ಮತ್ತು ಶ್ರೀಮತಿ ಜಯಂತಿ ಪ್ರಸಾದ್ ಪಾತಾಳ ಇವರನ್ನು ಸನ್ಮಾನಿಸಿದರು. ದಿವಾಕರ ಆಚಾರ್ಯ ಗೇರುಕಟ್ಟೆ ಅಭಿನಂದನ ನುಡಿಗಳನ್ನಾಡಿದರು.
ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯರನ್ನು ಪಾತಾಳ ಅಂಬಾಪ್ರಸಾದ್ ಗೌರವಿಸಿ ಸಂಘಕ್ಕೆ ಆರ್ಥಿಕ ನೆರವನ್ನು ನೀಡಿದರು. ಆರಂಭದಲ್ಲಿ ಜರಗಿದ ಶಾಂಭವಿ ವಿಲಾಸ ತಾಳಮದ್ದಳೆಯನ್ನು ನಿವೃತ್ತ ಉಪನ್ಯಾಸಕ ಮಹಾಲಿಂಗೇಶ್ವರ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ಹಿರಿಯ ಕಲಾವಿದ ಪಾತಾಳ ವೆಂಕಟರಮಣ ಭಟ್ ಉಪಸ್ಥಿತರಿದ್ದರು. ಭಾಗವಹಿಸಿದ ಕಲಾವಿದರನ್ನು ಪಾತಾಳ ಅಂಬಾ ಪ್ರಸಾದ್ ಸ್ಮರಣಿಕೆಯೊಂದಿಗೆ ಗೌರವಿಸಿದರು.
ಭಾಗವತರಾಗಿ ವಿಘ್ನೇಶ್ವರ ಭಟ್ ನೂಜಿ, ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಪದ್ಮನಾದ ಕುಲಾಲ್ ಹಿಮ್ಮೇಳದಲ್ಲಿ ಅಚ್ಯುತ ಪಾಂಗಣ್ಣಾಯ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಶ್ರೀಪತಿ ಭಟ್ ಉಪ್ಪಿನಂಗಡಿ ಚಕ್ರತಾಳದಲ್ಲಿ ರಮೇಶ್ ಭಟ್ ಕಜೆ ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ್, ಸತೀಶ್ ಆಚಾರ್ಯ ಮಾಣಿ, ಮಹಾಲಿಂಗೇಶ್ವರ ಭಟ್ ಪೆರಿಯಡ್ಕ, ಗುಡ್ಡಪ್ಪ ಬಲ್ಯ, ಜಯರಾಮ ನಾಲ್ಗುತ್ತು, ಸಂಜೀವ ಪಾರೆಂಕಿ, ಶ್ರೀಮತಿ ಶ್ರುತಿ ವಿಸ್ಮಿತ್ ಭಾಗವಹಿಸಿದ್ದರು.
ಸಂಘದ ಕಾರ್ಯದರ್ಶಿ ಶ್ರೀಪತಿ ಭಟ್ ಉಪ್ಪಿನಂಗಡಿ ಸ್ವಾಗತಿಸಿ ಗುಡ್ಡಪ್ಪ ಬಲ್ಯ ಕಾರ್ಯಕ್ರಮ ನಿರೂಪಿಸಿದರು. ಮುಖ್ಯೋಪಾಧ್ಯಯ ಕೆ.ಶ್ರೀಧರ್ ಭಟ್ ವಂದಿಸಿದರು.