ಎಚ್.ಡಿ.ರೇವಣ್ಣ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು

ಶೇರ್ ಮಾಡಿ

ಮಹಿಳೆಯೊಬ್ಬರ ಕಿಡ್ನಾಪ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಜೆಡಿಎಸ್ ಹಿರಿಯ ನಾಯಕ, ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಸೋಮವಾರ ಸಂಜೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ.

ಜಾಮೀನು ಪ್ರತಿ ಜೈಲು ಅಧಿಕಾರಿಗಳ ಕೈಗೆ ಸೇರಬೇಕಾಗಿರುವ ಹಿನ್ನಲೆಯಲ್ಲಿ ನಾಳೆ(ಮಂಗಳವಾರ)ಬೆಳಗ್ಗೆ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಯಾಗಲಿದ್ದಾರೆ.

ಇಬ್ಬರ ಶ್ಯೂರಿಟಿ, 5 ಲಕ್ಷ ರೂ. ಬಾಂಡ್ ನೀಡಬೇಕು. ಸಾಕ್ಷ್ಯಾಧಾರಗಳನ್ನು ನಾಶಪಡಿಸಬಾರದು, ಎಸ್ ಐಟಿ ಅಧಿಕಾರಿಗಳ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂಬ ಷರತ್ತು ವಿಧಿಸಿ ಕೋರ್ಟ್ ತೀರ್ಪು ನೀಡಿದೆ.

Leave a Reply

error: Content is protected !!