ಪಟ್ಲಡ್ಕ: ಚಲಿಸುತ್ತಿರುವ ಕಾರಿನ ಮೇಲೆ ಬಿದ್ದ ಮರ; ಜಖಂ ಗೊಂಡ ಕಾರು

ಶೇರ್ ಮಾಡಿ

ಕೊಕ್ಕಡ: ಕೌಕ್ರಾಡಿ ಗ್ರಾಮದ ಪಟ್ಲಡ್ಕ ಎಂಬಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದ ಘಟನೆ ಮೇ.13ರಂದು ಬೆಳಗ್ಗೆ ನಡೆದಿದೆ.

ಹಾಸನದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಮಾರುತಿ ಶಿಫ್ಟ್ ಕಾರಿನ ಮೇಲೆ ರಸ್ತೆಯ ಬದಿಯಲ್ಲಿ ಇದ್ದ ಮರ ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂ ಗೊಂಡಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ.

ನೆಲ್ಯಾಡಿ ಹೊರಠಾಣೆ ಹೆಡ್‌ಕಾನ್‌ಸ್ಟೇಬಲ್ ಕುಶಾಲಪ್ಪ ನಾಯ್ಕ್, ಸಿಬ್ಬಂದಿ ನಾಗರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಸ್ತೆಯ ಎರಡು ಇಕ್ಕಲಗಳಲ್ಲಿ ಬಾಗಿಕೊಂಡ ಅಪಾಯಕಾರಿ ಮರಗಳು ಇವೆ, ಈ ರೀತಿಯ ಘಟನೆಗಳು ಪದೇಪದೇ ಸಂಭವಿಸುತ್ತಲೇ ಇದೆ. ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Leave a Reply

error: Content is protected !!