ಬಂಟ್ವಾಳ : ಕಾರು ಢಿಕ್ಕಿ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಶೇರ್ ಮಾಡಿ

ಬಂಟ್ವಾಳ: ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ‌ ಹೊಡೆದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ನಡೆದಿದೆ.ದ್ವಿಚಕ್ರ ವಾಹನ ಸವಾರ, ಪುತ್ತೂರು ನೆಹರುನಗರ ನಿವಾಸಿ, ನಿವೃತ್ತ ಸೈನಿಕ ಚಿದಾನಂದ್ ಕಾಮತ್ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮುಡಿಪು ಇನ್ಫೋಸಿಸ್ ಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಅವಿವಾಹಿತನಾಗಿದ್ದು ತಾಯಿ ಜೊತೆ ವಾಸವಾಗಿದ್ದರು. ಮೃತರು ತಾಯಿ ಹಾಗೂ ಐವರು ಸಹೋದರರನ್ನು ಅಗಲಿದ್ದಾರೆ. ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

error: Content is protected !!